Breaking NewsNEWSದೇಶ-ವಿದೇಶ

ಮುಂದೆಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿ ಖಚಿತ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಗಗನಕ್ಕೇರುತ್ತಿದೆ, ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ.

ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ರಾಜ್ಯ ಸರ್ಕಾರ ಕೇಳುತ್ತಿಲ್ಲ. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ ರೂ. ಅದರಲ್ಲಿ 15-20 ಸಾವಿರ ಕೋಟಿ ರೂ.ಗಳನ್ನು ಬಡವರಿಗೆ ನೀಡಿದ್ದರೆ ಏನೂ ನಷ್ಟವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಘೋಷಿಸಿರುವ ಪುಡಿಗಾಸಿನ ಪ್ಯಾಕೇಜ್ ಯಾರಿಗೆ ಸಿಗುತ್ತೋ? ಬಿಡುತ್ತೋ? ಗೊತ್ತಿಲ್ಲ. ಕೊರೊನಾದಿಂದ ಮೃತರಾದರೆ ಕುಟುಂಬದಲ್ಲಿ ಒಬ್ಬರಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಹೇಳಿದೆ. ಆಸ್ಪತ್ರೆಯಲ್ಲಿ ಕುಟುಂಬದ ಒಬ್ಬರ ಚಿಕಿತ್ಸೆಗೆ ಮಾತ್ರ ಹಣ ಪಡೆಯುವರೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ತಲಾ ರೂ. 5 ಲಕ್ಷ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ರೂ. ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಸಿಎಂ ಬಿಎಸ್‌ವೈ ಅವರನ್ನು ಆಗ್ರಹಿಸಿದ್ದಾರೆ.

ಸೆಪ್ಟಂಬರ್-ಅಕ್ಟೋಬರ್ ನಲ್ಲಿ ಮೂರನೇ ಅಲೆ ಬರುವ ನಿರೀಕ್ಷೆ ಇದೆ. ಅಷ್ಟರಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಬೇಕು. ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೊನಾ ಬರುವುದಿಲ್ಲ. ಹೀಗಾಗಿ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು