ನಮ್ಮರಾಜ್ಯರಾಜಕೀಯ

ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ : ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕಿತ್ತಾಟಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಜತೆಗೆ ಬಸವಣ್ಣನವರ ವಚನದ ಮೂಲಕ ಬಿಜೆಪಿಗರ ನಡೆಯಿಂದ ರಾಜ್ಯದ ಜನ ಪಡುತ್ತಿರುವ ತೊಂದರೆ ಸಿಲುಕಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜನೆ ಅಂತ ವಾಗ್ದಾಳಿ ನಡೆಸಿದ್ದಾರೆ.

“ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ‌ ಸಿಎಂ ಆಗಬಲ್ಲ‌ ನಾಯಕನೇ ಇಲ್ಲವಂತೆ…” ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು ಎಂದು ಕಿಡಿಕಾರಿದ್ದಾರೆ.

ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ.

ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ ಎಂದು ಪ್ರಶ್ನಿಸಿದ್ದಾರೆ.

ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ “ಸಮಾಜ ಸುಧಾರಕರು” ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ ಎಂದಿದ್ದಾರೆ.

ಕೋವಿಡ್‌, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ‌. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು ಎಂದು ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್ ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು