Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ರಾಜ್ಯದ ರಾಜಧಾನಿಯಲ್ಲಿ ಶತಕ ಬಾರಿಸಿದ ಪೆಟ್ರೋಲ್‌ ದರ: ಇದು ಇತಿಹಾಸದಲ್ಲೇ ಮೊದಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಜೂನ್​ ತಿಂಗಳ ಆರಂಭದಿಂದ ಪೆಟ್ರೋಲ್​ ಮತ್ತು ಡೀಸೆಲ್​ ದರ ಒಟ್ಟು 10 ಬಾರಿ ಏರಿಕೆ ಕಂಡಿದೆ. ಒಂದು ದಿನದ ವಿರಾಮದ ಬಳಿಕ ಶುಕ್ರವಾರ (ಇಂದು, ಜೂನ್​ 18) ಇಂಧನ ದರ ಏರಿಕೆಯ ಕಂಡಿದೆ. ಆ ಮೂಲಕ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿ ಮುನ್ನುಗ್ಗಿದೆ. ಇಂದು ಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 26-28 ಪೈಸೆ ಹಾಗೂ ಲೀಟರ್​ ಡೀಸೆಲ್​ ದರದಲ್ಲಿ 28-31 ಪೈಸೆ ಹೆಚ್ಚಳ ಮಾಡಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ ಮೇ ತಿಂಗಳಿನಲ್ಲಿ ಒಟ್ಟು 16 ಬಾರಿ ಇಂಧನ ದರವನ್ನು ಹೆಚ್ಚಳ ಮಾಡಲಾಗಿತ್ತು. ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 26 ಬಾರಿ ಇಂಧನ ದರವನ್ನು ಹೆಚ್ಚಿಸಲಾಗಿದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಬಳ್ಳಾರಿ ಹಾಗೂ ಉತ್ತರ ಕನ್ನಡದ ಶಿರಸಿಯಲ್ಲಿ ಈಗಾಗಲೇ ಲೀಟರ್​ ಪೆಟ್ರೋಲ್​ ದರ ಶತಕ ಬಾರಿಸಿ ಮುನ್ನುಗ್ಗಿದೆ. ಕಳೆದ ಒಂದು ದಿನದ ಹಿಂದೆಯಷ್ಟೇ ತೈಲ ದರ ಹೆಚ್ಚಳ ಬಳಿಕ ಈ ಗುಂಪಿಗೆ ಬೀದರ್​ ಮತ್ತು ಹಾವೇರಿ ಜಿಲ್ಲೆಗಳು ಸೇರಿಕೊಂಡಿದ್ದವು.

ಬೆಂಗಳೂರು ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 100.17 ರೂಪಾಯಿಗೆ ಏರಿಕೆ ಆಗಿದೆ ಹಾಗೂ ಲೀಟರ್​ ಡೀಸೆಲ್​ ದರ 92.97 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 96.93 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 87.69 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ ಪ್ರಮುಖ ಮೆಟ್ರೋ ನಗರಗಳಲ್ಲಿ ಗರಿಷ್ಠ ಮಟ್ಟದಲ್ಲಿರುವ ಮುಂಬೈ ನಗರದಲ್ಲಿ ಲೀಟರ್​ ಪೆಟ್ರೋಲ್​ ದರ 103.08 ರೂಪಾಯಿಗೆ ಏರಿಕೆ ಆಗಿದೆ ಹಾಗೂ ಲೀಟರ್​ ಡೀಸೆಲ್​ ದರ 95.14 ರೂಪಾಯಿಗೆ ಹೆಚ್ಚಳವಾಗಿದೆ.

ಚೆನ್ನೈನಲ್ಲಿ ಲೀಟರ್​ ಪೆಟ್ರೋಲ್​ ದರ 98.14 ರೂಪಾಯಿಗೆ ಏರಿಕೆ ಆಗಿದೆ. ಲೀಟರ್​ ಡೀಸೆಲ್​ ದರ 92.31 ರೂಪಾಯಿಗೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 96.84 ರೂಪಾಯಿ ಇದ್ದು, ಲೀಟರ್​ ಡೀಸೆಲ್​ ದರ 90.54 ರೂಪಾಯಿ ಇದೆ.

ರಾಜಸ್ಥಾನದ ಗಂಗಾನಗರ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.07 ರೂಪಾಯಿ ಆಗಿದ್ದು, ಲೀಟರ್​ ಡೀಸೆಲ್​ ದರ 100.82 ರೂಪಾಯಿಗೆ ಹೆಚ್ಚಳವಾಗಿದೆ. ಈ ಪುಟ್ಟ ನಗರದಲ್ಲಿ ಪೆಟ್ರೋಲ್​ ದರ ಮಾತ್ರವಲ್ಲದೇ ಲೀಟರ್​ ಡೀಸೆಲ್​ ದರವೂ ಕೂಡಾ 100ರ ಗಡಿ ದಾಟಿ ಮುನ್ನುಗ್ಗಿದೆ.

ನಿತ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುವ ಕೆಲಸವನ್ನು ಮಾಡುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತಾರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ