NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದಲ್ಲಿರೋದು ಬ್ರೈನ್‌ ಡೆಡ್‌ ಸರ್ಕಾರ: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಸರ್ಕಾರ ಸತ್ತುಹೋಗಿದೆ. ಈಗ ಇರೋದು ಬ್ರೈನ್‌ ಡೆಡ್‌ ಸರ್ಕಾರ ಎಂದು ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಅಂಗಾಂಗಗಳು ವೆಂಟಿಲೇಟರ್‌ ಮೂಲಕ ಕೆಲಸ ಮಾಡುತ್ತಿವೆ. ಆ ವೆಂಟಿಲೇಟರ್‌ ಯಡಿಯೂರಪ್ಪನವರು. ಅವರನ್ನು ತೆಗೆದರೆ ರೋಗಿ ಸತ್ತ ಎನ್ನುವಂತಹ ಪರಿಸ್ಥಿತಿ ಕರ್ನಾಟಕದಲ್ಲಿದೆ. ರಾಜ್ಯದ ಮಾನ ಮರ್ಯಾದೆಯನ್ನು ಬಿಜೆಪಿ ಶಾಸಕರು ಹರಾಜಾಕುತ್ತಿದ್ದಾರೆ ಎಂದು ಟೀಕಿಸಿದರು.

ಇದು ನಮ್ಮ ಆಪಾದನೆ ಅಲ್ಲ. ಬಿಜೆಪಿಯ ಪ್ರಮುಖರೇ ತಮ್ಮ ಪಕ್ಷದ ನಾಯಕರ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಜಲ ಸಂಪನ್ಮೂಲ ಇಲಾಖೆಯಡಿ ನಿಗಮಗಳಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪವನ್ನು ಬಿಜೆಪಿಯ ಎಚ್‌.ವಿಶ್ವನಾಥ್‌ ಮಾಡಿದ್ದಾರೆ.

ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಪಾಲನೆಯಾಗದೇ ರಾಜ್ಯ ಸರ್ಕಾರ 21,764 ಕೋಟಿ ರೂ. ಪೈಕಿ 4 ಸಾವಿರ ಕೋಟಿ ರೂ. ಅನ್ನು ನೇರವಾಗಿ ಕೊಟ್ಟುಬಿಟ್ಟಿದೆ. ಶೇ.10 ಕಮಿಷನ್‌ ಅನ್ನು ಸರ್ಕಾರ ತೆಗೆದುಕೊಂಡಿದೆ.

ಹಿಂದೆ ಮೋದಿ ಶೇ.10 ಸರ್ಕಾರ ಎಂದು ಟೀಕಿಸಿದ್ದರು. ಈಗ ತಮ್ಮದೇ ಪಕ್ಷದ ಭ್ರಷ್ಟಾಚಾರದ ಬಗ್ಗೆ ತಮ್ಮವರೇ ಮಾಡಿರುವ ಆರೋಪಗಳಿಗೆ ಉತ್ತರ ಕೊಡಬೇಕು ಮೋದಿ ಅವರು. 1.80 ಸಾವಿರ ಕೋಟಿ ರೂ. ಅನ್ನು ಸಿಎಂ ಯಡಿಯೂರಪ್ಪ ಅವರು ಸಾಲ ಮಾಡಿದ್ದಾರೆ. ರಾಜ್ಯದಲ್ಲೇ ಇದು ಇತಿಹಾಸ. ಇದು ಲೂಟಿಕೋರ, ಲಜ್ಜೆಗೆಟ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಮಾರ್ವಾಡಿ ಸಂಸ್ಥೆಯಂತೆ ವರ್ತಿಸುತ್ತಿದೆ
ಇನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾರ್ವಾಡಿ ಸಂಸ್ಥೆಯಂತೆ ವರ್ತಿಸುತ್ತಿದೆ. ಕಾರ್ನರ್‌ ನಿವೇಶನಗಳನ್ನು ಮಾಡಿ ಕೋಟ್ಯಂತರ ದುಡ್ಡನ್ನು ನೀರಿನಂತೆ ಖರ್ಚು ಮಾಡುತ್ತಿದ್ದಾರೆ. ಸರ್ವೇ ನಂ. 4 ವಿಚಾರದಲ್ಲಿ ಖಾತೆ ಕಂದಾಯ ಮಾಡಿಕೊಡುವಂತೆ ಹೈಕೋರ್ಟ್‌ ಸ್ಪಷ್ಟ ತೀರ್ಪು ನೀಡಿದ್ದರೂ, ಆಗಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅದು ಸರ್ಕಾರಿ ಜಮೀನು ಎಂದು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

ಇನ್ನು ಮುಡಾ ವಿಚಾರದಲ್ಲಿ ಮುಡಾ ವಿರುದ್ಧವೇ ವಾದ ಮಾಡಲು ವಕೀಲರೊಬ್ಬರನ್ನು ನೇಮಕ ಮಾಡಿಕೊಳ್ಳಲಾಗಿದೆ. 40 ಲಕ್ಷ ರೂ. ಕೊಟ್ಟು ವಾದ ಮಾಡಿಸುತ್ತಿದ್ದಾರೆ. ಅದು ಯಾರ ದುಡ್ಡು? ಸರ್ಕಾರ ಅದನ್ನು ವಸೂಲಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...