CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ: ಬುದ್ಧಿ ಮಾತು ಕೇಳದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ 

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಪ್ರೀತಿಯ ಬಲೆಯಲ್ಲಿ ಸಿಲುಕಿದ್ದ ಮಗಳಿಗೆ ಎಷ್ಟೇ ಬುದ್ಧಿ ಹೇಳೀದರೂ ಕೇಳದ ಹಿನ್ನೆಲೆಯಲ್ಲಿ ತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಟ್ಟಣದ ಮಹದೇಶ್ವರ ದೇವಸ್ಥಾನದ ರಸ್ತೆಯಲ್ಲಿ ನಡೆದಿದೆ.

ಪಟ್ಟಣದ ಗೊಲ್ಲರಬೀದಿಯ ನಿವಾಸಿ ಗಾಯತ್ರಿ (21) ಹತ್ಯೆಯಾದ ಯುವತಿ. ಈಕೆಯ ತಂದೆ ಜಯರಾಮ್‌ ಕೊಲೆ ಮಾಡಿದ  ಆರೋಪಿಯಾಗಿದ್ದು, ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಜಯರಾಮ್ಗೆ  ಮೂವರು ಹೆಣ್ಣು ಮಕ್ಕಳಿದ್ದು, ಮೊದಲನೆ ಮಗಳನ್ನು ಈಗಾಗಲೇ ಮದುವೆ ಮಾಡಿದ್ದಾರೆ.  ಎರಡೆನೇ ಮಗಳು ಮೈಸೂರಿನ ಕಾಲೇಜು ಒಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮೂರನೆಯವಳಾದ ಗಾಯತ್ರಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ ತಾಯಿ ಅನಾರೋಗ್ಯಕ್ಕೆ ಬಿದ್ದ ನಂತರ ತನ್ನ ವಿದ್ಯಾಭ್ಯಾಸವನ್ನು ಅರ್ಧದಲ್ಲೀಯೇ ನಿಲ್ಲಿಸಿ ಮನೆಯಲ್ಲಿಯೇ ತಂದೆತಾಯಿಗಳೊಂದಿಗೆ ವಾಸವಾಗಿದ್ದಳು.

ಈ  ನಡುವೆ ಗಾಯತ್ರಿ ಒಂದೂವರೆ ವರ್ಷದಿಂದ ಅನ್ಯ ಕೋಮಿನ ಯುವಕನ ಪ್ರೀತಿಯಲ್ಲಿ ಬಿದ್ದಿದ್ದಳು. ಈ ವಿಚಾರವಾಗಿ ತಂದೆ ಮಗಳಿಗೆ ಅನೇಕ ಬಾರಿ ಮನವೊಲಿಸಿ ಬುದ್ಧಿ ಮಾತು ಕೇಳದೆ ಹಠ ಹಿಡಿದಿದ್ದಳು. ಮನೆಯವರು ಮಾನ ಹೋಗುತ್ತದೆ ಬೇಡ ಎಂದರೂ ಆತನನ್ನು ಮದುವೆಯಾಗುತ್ತೇನೆ ಎನ್ನುತ್ತಿದ್ದ ಮಗಳ ಹಠಮಾರಿ ಧೋರಣೆಯಿಂದ ಕುಪಿತಗೊಂಡ ತಂದೆ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಊಟ ಕೊಡಲು ಬಂದ ಮಗಳನ್ನು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿ ತಾನೇ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ.

ವಿಷಯ ತಿಳಿದ ಬಳಿಕ ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ರವಿಪ್ರಸಾದ್‌, ವೃತ್ತ ನಿರೀಕ್ಷಕರಾದ ಜಗದೀಶ್‌, ಬಿ.ಆರ್.ಪ್ರದೀಪ್,  ಪಿಎಸ್ಐಗಳಾದ ಸದಾಶಿವ ತಿಪ್ಪಾರೆಡ್ಡಿ,  ಪುಟ್ಟರಾಜ ಮತ್ತು ಸಿಬ್ಬಂದಿ ವೀರೇಂದ್ರ ಕುಮಾರ್, ನಾರಾಯಣ ಶೆಟ್ಟಿ ಬೆರಳು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?