Vijayapatha – ವಿಜಯಪಥ
Saturday, November 2, 2024
Breaking NewsNEWSನಮ್ಮರಾಜ್ಯರಾಜಕೀಯ

ಅರುಣ್​ ಸಿಂಗ್ ಬೆಂಗಳೂರು ಭೇಟಿ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ? ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ ವಿರುದ್ಧವಷ್ಟೇ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಬಂಡುಕೋರ ಮರಿಗಳಿರಲಿ… ನರೇಂದ್ರ ಮೋದಿಯವರದ್ದು ಉತ್ತರ ಕುಮಾರನ ಪೌರುಷ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿಗಳು ಮತ್ತು ಅವರ ಮಗನ ವಿರುದ್ಧ ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಶಾಸಕರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳದೆ ಮೌನವಾಗಿರುವುದು ನೋಡಿದರೆ ಒಂದೋ ಬಿಜೆಪಿ ಹೈಕಮಾಂಡ್ ಈ ಆರೋಪಗಳನ್ನು ಒಪ್ಪಿಕೊಂಡಿದೆ, ಇಲ್ಲವೇ ಭ್ರಷ್ಟಾಚಾರದ ಹೇಸಿಗೆಯಲ್ಲಿ ಅದೂ ಕೂಡಾ ಪಾಲು ಪಡೆದಿದೆ ಎಂದೇ ಅರ್ಥವಲ್ಲವೇ?

ಮುಖ್ಯಮಂತ್ರಿಗಳು ಮತ್ತು ಮಗನ ವಿರುದ್ಧದ ಆರೋಪ ಇದೇ ಮೊದಲ ಬಾರಿ ಕೇಳಿಬಂದದ್ದಲ್ಲ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಒಂದು ವರ್ಷದಿಂದ ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಬಂದಿದ್ದಾರೆ. ಇನ್ನೊಬ್ಬ ಶಾಸಕ ಸಿ.ಪಿ.ಯೋಗೀಶ್ವರ್ ಅವರೂ ಇದಕ್ಕೆ ದನಿಗೂಡಿಸಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಬೇಕು.

ಈಗಿನ ಸಿಎಂ ಸರ್ಕಾರದ ರೂವಾರಿಯೇ ತಾನೆಂದು ಹೇಳಿಕೊಳ್ಳುತ್ತಿರುವ ಶಾಸಕ ಎಚ್.ವಿಶ್ವನಾಥ್ ಅವರೇ ಈ ಸರ್ಕಾರವನ್ನು ‘ಗುತ್ತಿಗೆದಾರರ ಸರ್ಕಾರ’ ಎಂದು ಬಣ್ಣಿಸಿರುವುದು ನೋಡಿದರೆ ಅವರ ಬಳಿ ಬೇರೆ ಸಚಿವರ ಭ್ರಷ್ಟಾಚಾರದ ಮಾಹಿತಿಯೂ ಇದ್ದ ಹಾಗಿದೆ. ಎಸಿಬಿ ಅವರನ್ನೂ ಕರೆದು ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಿಗೆ ಬರಬಹುದು.

ನಗರದ ಬಿಐಇಸಿಯಲ್ಲಿ ನಿರ್ಮಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್ ನ ಹಾಸಿಗೆ ಮತ್ತು ಬೆಡ್ ಗಳ ಖರೀದಿ-ಮಾರಾಟದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಭ್ರಷ್ಟಾಚಾರ ಎಸಗಿದ್ದಾರೆ ಮತ್ತು ಭೂಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಎಚ್.ವಿಶ್ವನಾಥ್ ಅವರ ಇನ್ನೊಂದು ಆರೋಪದ ಬಗ್ಗೆಯೂ ತನಿಖೆ ನಡೆಯಬೇಕು.

ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ ಸಿಎಂ ಅವರ ಮಗನ ಮೇಲಿದೆ. ಎರಡನೆಯದಾಗಿ ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ.

ಭದ್ರಾ ಮೇಲ್ದಂಡೆ ಕಾಮಗಾರಿಯ ರೂ. 20,000 ಕೋಟಿ ಟೆಂಡರ್ ನಲ್ಲಿ ಬಿ.ವೈ ವಿಜಯೇಂದ್ರ 10% ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಶಾಸಕ ಎಚ್.ವಿಶ್ವನಾಥ್ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು ಸಿಎಂ ಬಿಎಸ್‌ವೈ ಅವರನ್ನು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ