NEWSನಮ್ಮರಾಜ್ಯಸಂಸ್ಕೃತಿ

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡ ಕೈಬಿಟ್ಟ ಕೇಂದ್ರದ ಪ್ರೈಡ್: ಎಚ್‌ಡಿಕೆ ಆಕ್ರೋಶ

ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿಲ್ಲ l "ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ"

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ಧಿಕ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು “ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ” ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ ಎಂದು ಸವಾಲು ಎಸೆದಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?