NEWSನಮ್ಮರಾಜ್ಯರಾಜಕೀಯ

ಕಿಕ್‌ಬ್ಯಾಕ್ ಆರೋಪದಲ್ಲಿ ಹುರುಳಿಲ್ಲ, ಹೀಗಾಗಿ ತನಿಖೆ ಅನವಶ್ಯಕ: ಸಚಿವ ಬೊಮ್ಮಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯ 20 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಕಿಕ್‌ಬ್ಯಾಕ್ ಪಡೆದಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಆರೋಪ ಕೇಳಿ ಬಂದ ತಕ್ಷಣ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಅವರು ದಾಖಲೆಗಳ ಸಹಿತ ಸತ್ಯಾಂಶ ಬಹಿರಂಗಪಡಿಸಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆಯ ಅವಶ‍್ಯಕತೆ ಇಲ್ಲ ಎಂದು ತಿಳಿಸಿದರು.

ಈ ವಿಚಾರವಾಗಿ ವಿಪಕ್ಷದವರು ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ. ವಿಪಕ್ಷದವರು ಟೀಕೆ ಮಾಡುವುದು ಸಹಜ. ಆದರೆ, ಟೆಂಡರ್ ಪ್ರಕ್ರಿಯೆ ಪ್ರಾರದರ್ಶಕವಾಗಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಶಾಸಕ ಅರವಿಂದ ಬೆಲ್ಲದ್ ಅವರ ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಬೆಲ್ಲದ್ ಅವರೊಂದಿಗೆ ತನಿಖಾಧಿಕಾರಿ ಮಾತುಕತೆ ನಡೆಸಿದ್ದಾರೆ ಎಂದು ತಳಿಸಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ