NEWSದೇಶ-ವಿದೇಶರಾಜಕೀಯ

ತ.ನಾಡು ಮಾತು ಕೇಳಿ ಮೇಕೆದಾಟು ಯೋಜನೆಗೆ ಅನುಮತಿ ವಿಳಂಬವೆ: ಕೇಂದ್ರಕ್ಕೆ ಎಚ್‍ಡಿಕೆ ಪ್ರಶ್ನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೇಕೆದಾಟು ಡ್ಯಾಂಗೆ ಅನುಮತಿ ನೀಡಬಾರದೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ತಮಿಳುನಾಡು ಮಾಜಿ ಸಿಎಂ ಪಳನಿಸ್ವಾಮಿ (@EPSTamilNadu) ಯೋಜನೆ ತಡೆಯಲು ಪ್ರಧಾನಿ ಮೇಲೆ ಒತ್ತಡ ಹೇರುತ್ತಾ ಬಂದಿದ್ದಾಗಿ ಹೇಳಿದ್ದಾರೆ. ಕೇಂದ್ರವು ತಮಿಳುನಾಡಿನ ಒತ್ತಡಕ್ಕೆ ಮಣಿದು ಅನುಮತಿ ಮುಂದೂಡತ್ತಾ ಬಂದಿದ್ದೇ ಆದರೆ ಅದು ಕನ್ನಡಿಗರಿಗೆ ಬಗೆದ ದ್ರೋಹ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮತಿ ಸಿಕ್ಕಿಲ್ಲ. ಇತ್ತ, ಯೋಜನೆ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗುತ್ತಾ ಬಂದವು. ಇದೆಲ್ಲ ಗಮನಿಸಿದರೆ ಯೋಜನೆ ತಡೆಯಲು ತಮಿಳುನಾಡು–ಕೇಂದ್ರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಒತ್ತಡ ಹೇರಿತ್ತೇ? ಅದರ ಮಾತು ಕೇಳಿ ಅನುಮತಿ ವಿಳಂಬ ಮಾಡಲಾಯಿತೇ? ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು. ಇಲ್ಲವೇ ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ ‘ಭಾಷಾ ದುರಭಿಮಾನಿ ಬಿಜೆಪಿ ಸಂಸದರು’ ಪ್ರಶ್ನೆ ಮಾಡಿ ಉತ್ತರ ಪಡೆದುಕೊಂಡು ಬರಬೇಕು. ಇಲ್ಲವೇ ಬಾಕಿ ಇರುವ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ