NEWSನಮ್ಮರಾಜ್ಯ

ನಾಳೆಯಿಂದ ರಸ್ತೆಗಿಳಿಯಲಿವೆ ಸಾರಿಗೆಯ ನಾಲ್ಕೂ ನಿಗಮಗಳಿಂದ 8 ಸಾವಿರ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಾಳೆಯಿಂದ ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಸ್​ಗಳನ್ನು ರಸ್ತೆಗಿಳಿಸಲು ನಾಲ್ಕೂ ಸಾರಿಗೆ ನಿಗಮಗಳು ಸಿದ್ದತೆ ನಡೆಸಿದ್ದು, ಮೊದಲ ಹಂತದಲ್ಲಿ 2 ಸಾವಿರ ಬಿಎಂಟಿಸಿ, 3 ಸಾವಿರ ಕೆಎಸ್‌ಆರ್‌ಟಿಸಿ, 2 ಸಾವಿರ ಎನ್‌ಇಕೆಆರ್‌ಟಿಸಿ ಮತ್ತು 1500 ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್​ಗಳು ಸೇವೆ ಒದಗಿಸಲಿವೆ.

ಬೆಳಗ್ಗೆ 6ರಿಂದ ಸಂಜೆ 7 ಗಂಟೆಯವರೆಗೆ ಬಸ್‌ಗಳು ಸಂಚರಿಸಲಿದ್ದು, ಸಂಜೆ 7 ಗಂಟೆ ನಂತರ ಬಸ್ ಸಂಚಾರ ಇರುವುದಿಲ್ಲ. ಜತೆಗೆ ಬೆಳಗ್ಗೆ 6 ಗಂಟೆಗೂ ಮುನ್ನವೂ ಬಿಎಂಟಿಸಿ ಬಸ್ ಸಂಚರಿಸುವುದಿಲ್ಲ.

ಇನ್ನು ಬಿಎಂಟಿಸಿ ಸಿಬ್ಬಂದಿ 8 ಗಂಟೆಗೂ ಹೆಚ್ಚು ಕಾಲ ಕೆಲಸ ಮಾಡುವಂತಿಲ್ಲ. ಪ್ರತಿ ಡಿಪೋದಲ್ಲೂ 5 ಹೆಚ್ಚುವರಿ ಬಸ್‌ಗಳು ಇರಬೇಕು. ಬಸ್‌ಗಳಲ್ಲಿ ಮಾರ್ಗಸೂಚಿ ಫಲಕ ಕಡ್ಡಾಯವಾಗಿರಬೇಕು ಮತ್ತು ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.

ಕೆಎಸ್​ಆರ್​ಟಿಸಿ ಮಾರ್ಗಸೂಚಿ
ನಾಳೆಯಿಂದ ಮೈಸೂರು, ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಕೆಎಸ್​ಆರ್​ಟಿಸಿ ಬಸ್​ ಸೇವೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 3 ಸಾವಿರ ಬಸ್​ಗಳು ಸಂಚರಿಸಲಿವೆ.

ಪ್ರಯಾಣಿಕರು ಕೊವಿಡ್ 19 ತಡೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೆಎಸ್ಆರ್​ಟಿಸಿ ಸೂಚಿಸಿದೆ. ಆದರೆ ಅಂತಾರಾಜ್ಯಗಳಿಗೆ ಕೆಎಸ್​ಆರ್​ಟಿಸಿ ಬಸ್ ಸೇವೆ ಸದ್ಯ ಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ಅಂತಾರಾಜ್ಯ ಬಸ್ ಸಂಚಾರದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಎನ್‌ಇಕೆ​ಆರ್​ಟಿಸಿ ಮಾರ್ಗಸೂಚಿ
ಎನ್‌ಇಕೆ​ಆರ್​ಟಿಸಿ ಬಸ್​ ಸೇವೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 2 ಸಾವಿರ ಬಸ್​ಗಳು ಸಂಚರಿಸಲಿವೆ. ಅವುಗಳಲ್ಲಿ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲೂ ಸಂಚರಿಸಲಿವೆ ಎಂದು ನಿಗಮದ ಅಧಿಕಾರಿ ತಿಳಿಸಿದ್ದಾರೆ.

ಎನ್‌ಡಬ್ಲ್ಯುಕೆ​ಆರ್​ಟಿಸಿ ಮಾರ್ಗಸೂಚಿ
ಎನ್‌ಡಬ್ಲ್ಯುಕೆ​ಆರ್​ಟಿಸಿ ಬಸ್​ ಸೇವೆ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 1500 ಬಸ್​ಗಳು ಸಂಚರಿಸಲಿವೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ಲಭ್ಯತೆ ಮೇರೆಗೆ ಹಂತಹಂತವಾಗಿ ಬಸ್‌  ಸಂಚರಿಸಲಿವೆ ಎಂದು ನಿಗಮದ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...