NEWSನಮ್ಮರಾಜ್ಯರಾಜಕೀಯ

ಬೆಡ್ ಬ್ಲಾಕಿಂಗ್ ದಂಧೆ ಆರೋಪ: ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ನಂಜಪ್ಪ ಕಾಳೇಗೌಡ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಎರಡನೇ ಅಲೆಯ ಮಹಾದುರಂತದ ಸಮಯದಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಬೆಡ್ ಬ್ಲಾಕಿಂಗ್ ದಂಧೆಗೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಾಕಷ್ಟು ಕುಮ್ಮಕ್ಕು ನೀಡಿರುವುದು ಮೇಲ್ನೋಟಕ್ಕೆ ತಿಳಿದುಬರುವ ವಿಷಯ. ಈ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆಗ್ರಹಿಸಿದ್ದಾರೆ.

ನಗರದ ಆಮ್ ಆದ್ಮಿ ಪಕ್ಷದ ಮಾಧ್ಯಮ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯ ಮಾತನಾಡಿದ ಅವರು, ಹಲವು ವರ್ಷಗಳಿಂದ ಇವರ ಬಳಿ ಆಪ್ತ ಸಹಾಯಕನಾಗಿರುವ ಬಾಬು ಎಂಬಾತನನ್ನು ಹಾಗೂ ಇನ್ನಿತರರನ್ನು ಈಗಾಗಲೇ ಕೇಂದ್ರ ಅಪರಾಧ ದಳ ಬಂಧಿಸಿ ವಿಚಾರಣೆಗೊಳಪಡಿಸಿದೆ. ಈ ಬಗ್ಗೆ 200ಕ್ಕೂ ಹೆಚ್ಚು ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಹ ಈಗಾಗಲೇ ಸಲ್ಲಿಸಿದೆ ಎಂದರು.

ಈ ಹಿಂದೆ ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ವಾರ್ ರೂಂಗೆ ನುಗ್ಗಿ ಶಾಸಕರ ಬೆಂಬಲಿಗರು ಬೆಡ್ ಬ್ಲಾಕಿಂಗ್ ದಂಧೆಗೆ ಬೆಂಬಲ ನೀಡುತ್ತಿಲ್ಲವೆಂಬ ಕಾರಣಕ್ಕಾಗಿ ಕಿರಿಯ ಐಎಎಸ್ ಅಧಿಕಾರಿಯೊಬ್ಬರಿಗೆ ಹಲ್ಲೆಯನ್ನು ಸಹ ನಡೆಸಲು ಪ್ರಯತ್ನಿಸಿ ದಾಂಧಲೆ ನಡೆಸಿದ್ದರು ಎಂದು ತಿಳಿಸಿದರು.

ಶಾಸಕರ ಆಪ್ತ ಸಹಾಯಕ ಶಾಸಕರ ಬೆಂಬಲವಿಲ್ಲದೆ ಇಂತಹ ದುಷ್ಕೃತ್ಯಗಳಲ್ಲಿ ತೊಡಗುವುದು ಖಂಡಿತ ಸಾಧ್ಯವಿಲ್ಲ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಿರುವ ವಿಷಯ. ಈ ಪ್ರಕರಣದಲ್ಲಿ ಶಾಸಕರ ಪಾತ್ರ ಏನು ಎಂಬುದನ್ನು ಸರ್ಕಾರ ಹಾಗೂ ತನಿಖಾ ಸಂಸ್ಥೆಯು ರಾಜ್ಯದ ಜನತೆಗೆ ಬಹಿರಂಗಗೊಳಿಸಬೇಕಿದೆ. ಕೇವಲ ಸಣ್ಣಪುಟ್ಟ ವ್ಯಕ್ತಿಗಳನ್ನು ಮಾತ್ರ ಬಂಧಿಸಿ ಪ್ರಭಾವಿ ಶಾಸಕರನ್ನು ಕರೆದು ವಿಚಾರಣೆಯನ್ನೂ ಸಹ ಮಾಡಿಲ್ಲ. ಬಿಜೆಪಿ ಸರ್ಕಾರವು ಅವರದೇ ಪಕ್ಷದ ಶಾಸಕನ ಪರ ನಿಂತಿರುವುದು ದೇಶದ ನ್ಯಾಯದಾನ ವ್ಯವಸ್ಥೆಗೆ ಅಪಮಾನ ತರುವ ವಿಷಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಡ್ ಬ್ಲಾಕಿಂಗ್ ನಂತಹ ಘೋರಾತಿಘೋರ ಅಪರಾಧ ಕೃತ್ಯ ದಿಂದ ಈಗಾಗಲೇ ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ. ಅವರ ಸಾವಿಗೆ ಸೂಕ್ತ ನ್ಯಾಯವನ್ನು ಒದಗಿಸುವ ಇರಾದೆ ಹಾಗೂ ಕಿಂಚಿತ್ ಕಾಳಜಿ ಏನಾದರೂ ಸರ್ಕಾರಕ್ಕೆ ಇದ್ದಲ್ಲಿ ಈ ಕೂಡಲೇ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸಿ ಸೂಕ್ತ ತನಿಖೆ ಕೈಗೊಳ್ಳಬೇಕಿದೆ. ಇಲ್ಲದಿದ್ದಲ್ಲಿ ಪ್ರಕರಣವು ಪ್ರಭಾವಿಗಳ ಒತ್ತಡದಿಂದ ಸಂಪೂರ್ಣ ಹಳ್ಳ ಹಿಡಿಯುವ ಸಾಧ್ಯತೆ ಇದೆ ಎಂದು ನಂಜಪ್ಪ ಕಾಳೇಗೌಡ ಕಳವಳ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...