NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕರ್ನಾಟಕ ಕಾಂಗ್ರೆಸ್‌ ಬಾಂಬ್‌ ದೆಹಲಿಯಲ್ಲಿ ಸಿಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತಣ್ಣಗಾಗುವ ಮುನ್ನವೇ ಇತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಇದರ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ಭಾನುವಾರ ದೆಹಲಿಗೆ ತೆರಳಿದ್ದಾರೆ. ಈ ವಿಚಾರ ಈಗ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ಅಧ್ಯಕ್ಷರಾದ ಬಳಿಕ ದೆಹಲಿಗೆ ಬಂದಿರಲಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟರೆ ಭೇಟಿಯಾಗುತ್ತೇನೆ.

ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಮನವಿ ಮಾಡುತ್ತೇನೆ. ಒಂದು ವರ್ಷದಿಂದ ಎಲ್ಲವನ್ನೂ ಗಮನಿಸಿದ್ದೇನೆ. ಯಾರು ಕೆಲಸ ಮಾಡುತ್ತಾರೆ ಮಾಡಲ್ಲ ಅಂತ ಗೊತ್ತಿದೆ. ಕೆಲವರನ್ನು ಬದಲಾವಣೆ ಮಾಡಬೇಕು ಎಂದು ತೀರ್ಮಾನಿದ್ದೇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇನ್ನು ಸಿಎಂ‌ ಸ್ಥಾನದ ಬಗ್ಗೆ ದೆಹಲಿ ಹೈಕಮಾಂಡ್ ನಿರ್ಧಾರ ಮಾಡುತ್ತಾರೆ. ಸದ್ಯಕ್ಕೆ ಈ ಸ್ಥಾನ ಖಾಲಿ ಇಲ್ಲ. ಖಾಲಿ ಇಲ್ಲದೆ ಇರುವ ಸ್ಥಾನಕ್ಕೆ ನಮಗ್ಯಾಕೆ ಪೈಪೋಟಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿ ಕೊಡಲ್ಲ. ನನ್ನ ಹೆಸರನ್ನು ಯಾರೂ ಹೇಳುವುದು ಬೇಡ. ಮೊದಲು ಪಕ್ಷ ಕಟ್ಟಬೇಕು, ಚುನಾವಣೆ ಗೆಲ್ಲಬೇಕು. ನಾವು ಈಗ ಕೊರೊನಾ ಸಂಕಷ್ಟದಲ್ಲಿ ಜನರೊಂದಿಗೆ ಇರೋಣ ಎಂದು ದೆಹಲಿಗೆ ಭೇಟಿ ನೀಡಿರುವ ಬಗ್ಗೆ ತಿಳಿಸಿದರು.

ಅಧಿಕಾರ ನಡೆಸಲು ಬಿಜೆಪಿಯವರಿಗೆ ಬರಲ್ಲವೆಂಬುವುದು ಸ್ಪಷ್ಟ
ಬಿಜೆಪಿಯವರಿಗೆ ಅಧಿಕಾರ ನಡೆಸಲು ಬರಲ್ಲವೆಂದು ಸ್ಪಷ್ಟವಾಗಿದೆ. ಸರ್ಕಾರದ ಕಾರ್ಯವೈಖರಿ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಚುನಾವಣೆ ಮೊದಲು ಗೆಲ್ಲಬೇಕು. ಸಿಎಂ‌ ಸ್ಥಾನ ಬಗ್ಗೆ ಮಾತನಾಡೋಕೆ ಇದು ಸಮಯವಲ್ಲ. ಬಿಜೆಪಿಯವರು ಸಿಎಂ ಸ್ಥಾನದ ಬಗ್ಗೆ ಮಾತನಾಡಬೇಕು. ನಮ್ಮ ಪಕ್ಷದವರಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆಗೆ ಕಳಂಕ
ಶಾಸಕ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಕೆಶಿ, ಭಾರತೀಯ ಜನತಾ ಪಕ್ಷದಲ್ಲಿ ಬ್ಲ್ಯಾಕ್ಮೇಲ್ ನಡೆಯುತ್ತಿದೆ. ತಮಿಳುನಾಡಿನ ಮಾಜಿ ಸಚಿವ ಮಣಿಕಂಠನ್ ಬಂಧಿಸಿದ್ದಾರೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಚಿವನ ಬಂಧನವಾಗಿದೆ.

ಆದರೆ, ರಮೇಶ್ ಜಾರಕಿಹೊಳಿಯನ್ನೂ ಈವರೆಗೆ ಬಂಧಿಸಿಲ್ಲ. ಕರ್ನಾಟಕದಲ್ಲಿ ಪೊಲೀಸ್ ವ್ಯವಸ್ಥೆಗೆ ಕಳಂಕ ಬಂದಿದೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯನ್ನು ಬಂಧಿಸಿಲ್ಲವೇಕೆ ಎಂದು ಪ್ರಶ್ನಿಸಿದರು. ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಅರ್ಜಿ ಹಾಕಲಿ ಮರುಸೇರ್ಪಡೆ ಬಗ್ಗೆ ಆನಂತರ ನೋಡುತ್ತೇವೆ ಎಂದ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...