NEWS

ಹೈಕೋರ್ಟ್ ನೋಟಿಸ್ ಪಡೆಯದ ರಮೇಶ್ ಜಾರಕಿಹೊಳಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಯುವತಿ ಎಸ್‍ಐಟಿ ಬದ್ಧತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೋಮವಾರ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಏಕ ಸದಸ್ಯ ಪೀಠದಲ್ಲಿ ನಡೆಯಿತು.

ಹೈಕೋರ್ಟ್ ನಿಂದ ನೋಟಿಸ್ ಪಡೆದು ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ಹಾಜರಾಗಿದ್ದರು. ಆದ್ರೆ ಹೈಕೋರ್ಟ್ ನೋಟಿಸ್ ಈವರೆಗೂ ರಮೇಶ್ ಜಾರಕಿಹೊಳಿ ಪಡೆದಿಲ್ಲ. ಹೈಕೋರ್ಟ್ ಜಾರಿ ಮಾಡಿದ ಹ್ಯಾಂಡ್ ಸಮನ್ಸ್ ಪಡೆಯಲು ರಮೇಶ್ ಜಾರಕಿಹೊಳಿ ನಿರಾಕರಿಸಿದ ವಿಷಯದೆಡೆ ನ್ಯಾಯಾಲಯದ ಗಮನ ಸೆಳೆದ ಸಂತ್ರಸ್ತೆ ಪರ ವಕೀಲ ಸಂಕೇತ್ ಏಣಗಿ, ರಮೇಶ್ ಜಾರಕಿಹೊಳಿ ಅವರ ಪರವಾಗಿ ಕಾಲಾವಕಾಶ ಕೇಳಿದ ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಎಸ್‍ಐಟಿ ಪರ ನ್ಯಾಯವಾದಿಗಳು ರಮೇಶ್ ಜಾರಕಿಹೊಳಿ ಪರವಲ್ಲ ಎಂದು ಪ್ರಸನ್ನಕುಮಾರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಂತ್ರಸ್ತೆ ಪರ ವಕೀಲ ಸಂಕೇತ್ ಏಣಗಿ, ಜನಪ್ರತಿನಿಧಿಗಳ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ರಚಿತವಾದ ವಿಶೇಷ ಪೀಠಕ್ಕೆ ಈ ಪ್ರಕರಣವನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ರು.

ಸಂತ್ರಸ್ತೆ ಪರ ವಕೀಲ ಸಂಕೇತ ಏಣಗಿ ಮನವಿ ಪುರಸ್ಕರಿಸಿ, ಪ್ರಕರಣವನ್ನು ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಪ್ರಕರಣ ವಿಚಾರಣೆಯನ್ನು ಜೂನ್‌ 23ರಕ್ಕೆ ಮುಂದೂಡಿತು.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ