CrimeNEWSರಾಜಕೀಯ

ನೀರಾವರಿ ನಂತರ ಅಬಕಾರಿ ಇಲಾಖೆ ಅಕ್ರಮ ಬಯಲು: ಮಾಜಿ ಸಿಎಂ ಎಚ್‌ಡಿಕೆ

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ ಎಂದು ಪ್ರಶ್ನಿಸಿದ್ದಾರೆ.

₹2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಬಿಎಸ್‌ವೈ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಎಂದು ಛೇಡಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...