NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ- ಸಿಎಂ ಸ್ಥಾನ ಕಾಲಿಯೂ ಇಲ್ಲ: ಸಂಸದ ಸುರೇಶ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೆ ಎಂದು ಜಮೀರ್‌ ಅಹಮದ್‌ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್, ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023 ಕ್ಕೆ ಚುನಾವಣೆ ಇದೆ. ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಾವು ಭಾವಿಸಿದ್ದೇವೆ. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಮಾಡಿದರು.

ಇನ್ನು ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು, ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ. ಇನ್ನು ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಸಿಎಂ ಸ್ಥಾನ ಕಾಲಿಯೂ ಇಲ್ಲ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಅದು ಶಾಸಕರ ಅಭಿಪ್ರಾಯ ನನ್ನದಲ್ಲ 
ಅದು ಶಾಸಕರ ಅಭಿಪ್ರಾಯವೇ ಹೊರತು ನನ್ನ ಅಭಿಪ್ರಾಯವಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆಯೂ ಸುರೇಶ್ ಉತ್ತರಿಸಿದ್ದಾರೆ. ಅವರು ಅವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು, ನಾನು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಬಹುದು. ಆದರೆ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕಲ್ಲ? ಎಂದು ಸಿದ್ದರಾಮಯ್ಯ ಅವರಿಗೂ ಗುದ್ದು ಕೊಟ್ಟಿದ್ದಾರೆ.

ಮಲಗಿದ್ದವರೆಲ್ಲ ಈಗ ಎದ್ದಿದ್ದಾರೆ, ಹೀಗಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ವಿಪಕ್ಷದ ಸ್ಥಾನದಲ್ಲಿದ್ದು, ವಿಪಕ್ಷದ ಶಾಸಕರಂತೆ ಕೆಲಸ ಮಾಡಬೇಕಿದೆ. ಅವರ ಹೇಳಿಕೆಗಳು ಬರೀ ಕಾರ್ಯಕರ್ತರಲ್ಲಿ ಮಾತ್ರವಲ್ಲ, ಎಲ್ಲರಲ್ಲೂ ಗೊಂದಲ ಉಂಟು ಮಾಡುತ್ತದೆ ಎಂದು ಡಿಕೆಸು ಎಚ್ಚರಿಕೆ ಸಂದೇಶವನ್ನು ಈ ಮೂಲಕ ರವಾನಿಸಿದ್ದಾರೆ.

ಕೆಲವರಿಗೆ ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಚಟ
ಕೆಲವರಿಗೆ ಯಾರು ಏನಾದರಾಗಲಿ ನಾವು ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಚಟ ಉಳ್ಳವರು. ಜತೆಗೆ ಪಕ್ಷದ ಬಗ್ಗೆ ಉಡಾಫೆ ಮನಸ್ಥಿತಿಯವರು ಎಂದು ಅನಿಸುತ್ತಿದೆ. ನಿಜವಾದ ಕಾಂಗ್ರೆಸ್ ನಾಯಕರಾರೂ ಈ ರೀತಿ ಮಾತನಾಡುವುದಿಲ್ಲ, ಅನಗತ್ಯ ಭಾವನೆ ವ್ಯಕ್ತಪಡಿಸುವುದಿಲ್ಲ ಎಂದು ಹೇಳುವ ಮೂಲಕ ವಿಪಕ್ಷ ನಾಯಕರಿಗೆ ಪರೋಕ್ಷ ತಿರುಗೇಟು ನೀಡಿದ್ದಾರೆ ಸಂಸದ ಡಿಕೆಸು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?