NEWSನಮ್ಮರಾಜ್ಯರಾಜಕೀಯ

ಒಬ್ಬ ಮಾಜಿ ಸಿಎಂ ಕ್ಷೇತ್ರದ ಹುಡುಕಾಟದಲ್ಲಿ, ಇಂಥ ಪರಿಸ್ಥಿತಿ ಬರಬಾರದಿತ್ತು: ಟಾಂಗ್‌ಕೊಟ್ಟ ವಿಶ್ವನಾಥ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಬ್ಬ ಮಾಜಿ ಸಿಎಂ ಆದವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂಥ ಪರಿಸ್ಥಿತಿ ಬರಬಾರದಿತ್ತು, ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನೋದಕ್ಕೆ ಇದು ಟೂ ಅರ್ಲಿ. ಅಲ್ದೆ ಸಿಎಂ ಸ್ಥಾನ ಪತ್ರಾವಳಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ.

ಆರ್‌.ಟಿ.ನಗರದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ವಿಶ್ವನಾಥ್ ಭೇಟಿ ನೀಡಿದ ವೇಳೆ ಮಾತನಾಡಿ, ಸಿಎಂ ಸ್ಥಾನ ಉಂಡು ಬಿಸಾಡೋದಲ್ಲ. ಅದನ್ನು ಸ್ವಚ್ಛವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು ಎಂದು ಹೇಳಿದರು.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಸಿಎಂ ಎಂಬ ಗೊಂದಲ ಸೃಷ್ಟಿಯಾಗಿದೆ. ಶಿಷ್ಯಂದಿರು ಎಲ್ಲವನ್ನೂ ಮಾತಾಡುತ್ತಾರೆ, 150 ಸೀಟು ಬರುತ್ತೆ ಅಂತಾರೆ. ಆದರೆ, ಸಿದ್ದರಾಮಯ್ಯ ಸಿಎಂ ಆದಾಗಲೇ ಯಾಕೆ 70 ಸೀಟಿಗೆ ಬಂದು ನಿಂತಿದ್ದೀರಿ.  ಸಿಎಂ ಆಗುತ್ತಾರೆ ಎನ್ನುವ ಸಿದ್ದರಾಮಯ್ಯಗೆ ಈಗ ಕ್ಷೇತ್ರವೇ ಇಲ್ಲ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದಿದ್ದರೂ ಅವರಿಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನದ ಅವಕಾಶ ಕೊಟ್ಟಾಗಿದೆ. ಡಿ.ಕೆ.ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು, ಅವರಿಗೆ ಅವಕಾಶ ಸಿಗಬೇಕು.

ಒಂದ್ ಸಲ ಸಿದ್ದರಾಮಯ್ಯಗೆ ಅವಕಾಶ ಸಿಕ್ಕಾಗಿದೆ. ಈಗ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇದ್ದಾರೆ. ಜಮೀರ್​ನ ಮುಂದಿಟ್ಟುಕೊಂಡು ಹೋಗಬೇಡಿ ಸಿದ್ದರಾಮಯ್ಯನವರೇ ಒಳ್ಳೆಯದಾಗಲ್ಲ ಎಂದರು.

ರಮೇಶ್ ಜಾರಕಿಹೊಳಿ ರಾಜಕೀಯ ತಂತ್ರಗಾರಿಕೆ ವಿಚಾರ ಕುರಿತು ಮಾತನಾಡಿದ ವಿಶ್ವನಾಥ್, ಕಾನೂನು ವಿಚಾರದಲ್ಲಿ ಬೇರೆಯವರು ಏನೂ ಹೇಳೋದಕ್ಕಾಗಲ್ಲ. ಅವರು ಸಿಡಿ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದು ದುರಾದೃಷ್ಟ.

ಅವರೇ ಸಿಕ್ಕಿಹಾಕಿಕೊಂಡರೋ, ಬೇರೆಯವರು ಸಿಕ್ಕಿ ಹಾಕ್ಸಿದಾರೋ ಗೊತ್ತಿಲ್ಲ. ಆದರೆ, ಅವರ ರಾಜಕೀಯ ನಿರ್ಧಾರದಲ್ಲಿ, ಕಾನೂನು ವಿಚಾರದಲ್ಲಿ ಎಲ್ಲರೂ ಮಾತನಾಡುವುದಕ್ಕೆ ಆಗುವುದಿಲ್ಲ.  ಬಿಜೆಪಿ ಹೈಕಮಾಂಡ್ ಮುಂದೆ ನಮ್ಮ ಎಲ್ಲ ವಿಚಾರ ಹೇಳಲಾಗಿದೆ. ನಿರ್ಧಾರ ತೆಗೆದುಕೊಳ್ಳೋದು ಅವರಿಗೆ ಬಿಟ್ಟಿದ್ದು ಎಂದರು.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...