ಬೆಂಗಳೂರು: ರಾಜ್ಯ ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಆಶ್ರಯದಲ್ಲಿ ನಾಡಪ್ರಭು, ಬೆಂಗಳೂರು ನಿರ್ಮಾತೃ ಕಂಪೇಗೌಡರ 512 ನೇ ಜಯಂತಿಯನ್ನು ಭಾನುವಾರ ಆಚರಿಸಲಾಯಿತು.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಒಕ್ಕೂಟದ ಕೇಂದ್ರ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾ ಸಂಸ್ಥಾನ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ, ರೈಲ್ವೇ ಎಡಿಜಿಪಿ ಭಾಸ್ಕರ್ ರಾವ್, ಒಕ್ಕಲಿಗರ ಒಕ್ಕೂಟ ಟ್ರಸ್ಟ್ ಅಧ್ಯಕ್ಷ ಸಿ.ವಿ.ದೇವರಾಜ್, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಇದೇ ವೇಳೆ ಬಿಬಿಎಂಪಿ ನೌಕರರು, ದಾದಿಯರು, ಪೊಲೀಸ್ ಸಿಬ್ಬಂದಿ ಭದ್ರತಾ ಸಿಬ್ಬಂದಿ ಸೇರಿ ಕೊರೊನಾ ಸೇನಾನಿಗಳಿಗೆ ದಿನಸಿ ಕಿಟ್ ಗಳನ್ನು ನೀಡುವ ಮೂಲಕ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಿತ್ರನಟ ಜಯರಾಂ ಕಾರ್ತೀಕ್, ಕನ್ನಡ ಹೋರಾಟಗಾರ ತಿಮ್ಮಯ್ಯ ಮತ್ತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ಇತರರು ಉಪಸ್ಥಿತರಿದ್ದರು.