ಕೊಳ್ಳೇಗಾಲ: ಚಾಮರಾಜ ನಗರ ಜಿಲ್ಲಾಸ್ಪತ್ರೆಯಲ್ಲಿ ಉಂಟಾದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕೊಳ್ಳೇಗಾಲ ತಾಲೂಕಿನ ಪಾಳ್ಯದ ರಂಗನಾಯ್ಕ್ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೃತರ ಪತ್ನಿ ವೆಂಕಟಮ್ಮ ಅವರಿಗೆ 1 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.
ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕ ನರೇಂದ್ರ, ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ, ಬಾಲರಾಜ್ ಉಪಸ್ಥಿತರಿದ್ದರು.