Breaking NewsNEWSನಮ್ಮಜಿಲ್ಲೆ

ಸರ್ಕಾರದ ನಿಯಮ ಗಾಳಿಗೆ ತೂರಿದ ಬಿಎಂಟಿಸಿ: ಶೇ.100 ಪ್ರಯಾಣಿಕರ ಓಡಾಟಕ್ಕೆ ಅಧಿಕಾರಿಗಳಿಂದಲೇ ಮೌಖಿಕ ಅನುಮತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಅನ್‍ಲಾಕ್ 2ರಲ್ಲಿ ರಾಜ್ಯ ಸರ್ಕಾರ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ವೀಕೆಂಡ್ ಕರ್ಫ್ಯೂ ಬಳಿಕ ಬಿಎಂಟಿಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚು ಮಾಡಿದೆ. ಈ ಮಧ್ಯೆ ಬಿಎಂಟಿಸಿ ಸರ್ಕಾರದ ನಿಯಮವನ್ನು ಗಾಳಿಗೆ ತೂರಿ ಶೇ.100 ಪ್ರಯಾಣಿಕರನ್ನು ಬಸ್‍ನಲ್ಲಿ ತುಂಬಿಕೊಂಡು ಸಾಗುತ್ತಿದೆ.

ಶುಕ್ರವಾರ ಸಂಜೆಯಿಂದ ವೀಕೆಂಡ್ ಕರ್ಫ್ಯೂ ಶುರುವಾದ ಬಳಿಕ ಬಿಎಂಟಿಸಿ ಬಸ್‍ಗಳ ಸಂಖ್ಯೆಯನ್ನು ಶೇ.30 ರಷ್ಟು ಕಡಿಮೆ ಮಾಡಿ 1200 ಬಸ್ ಗಳನ್ನು ರಸ್ತೆಗೆ ಇಳಿಸಿತ್ತು. ಸೋಮವಾರ ವೀಕೆಂಡ್ ಕರ್ಫ್ಯೂ ಕೊನೆಗೊಂಡಿದ್ದು, 3500 ರಿಂದ 4000 ಬಿಎಂಟಿಸಿ ಬಸ್‍ಗಳನ್ನು ರಸ್ತೆಗೆ ಇಳಿಸಿದೆ.

ಈ ನಡುವೆ ಸರ್ಕಾರ ಶೇ. 50 ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದುಕೊಂಡು ಹೋಗಲು ಆದೇಶ ನೀಡಿದೆ. ಆದರೆ ಸರ್ಕಾರ ಹೇಳಿದ್ದ ರೂಲ್ಸ್ ಅನ್ನು ಸಂಪೂರ್ಣವಾಗಿ ಬಿಎಂಟಿಸಿ ಬಸ್ ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದಿದೆ. ನಿಂತುಕೊಂಡು ಪ್ರಯಾಣಿಸಲು ಅವಕಾಶ ಬೇಡ ಆದರೆ ಎಲ್ಲ ಸೀಟ್‌ಗಳು ಭರ್ತಿಯಾಗಬೇಕು ಎಂದು ಅಧಿಕಾರಿಗಳು ಸಿಬ್ಬಂದಿಗೆ ಮೌಖಿಕ ಆದೇಶ ನೀಡಿದ್ದು, ಕೆಲ ಬಸ್‌ ನಿಲ್ದಾಣಗಳಲ್ಲಿ ಅಧಿಕಾರಿಗಳೇ ಬಸ್‌ ಸೀಟ್‌ ಪೂರ್ತಿ ಪ್ರಯಾಣಿಕರಿದ್ದಾರೆ ಎಂದು ಖಚಿತ ಪಡಿಸಿಕೊಂಡ ಬಳಿಕ ಬಸ್‌ ಓಡಿಸಲು ಬಿಡುತ್ತಿದ್ದಾರೆ.

ಹೀಗಾಗಿ ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಂತೆ ಸರ್ಕಾರ ಆದೇಶ ಮಾಡಿದ್ದರೂ, ಬಿಎಂಟಿಸಿಯಲ್ಲಿ ಶೇ.100 ರಷ್ಟು ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ಸರ್ಕಾರದ ಆದೇಶ ಒಂದೇ ವಾರಕ್ಕೆ ಹಳ್ಳ ಹಿಡಿದಿದೆ.

ಕೊರೊನಾ ಇನ್ನೂ ಮುಗಿದಿಲ್ಲ, ಎರಡನೇ ಅಲೆ ಅಬ್ಬರ ಕಡಿಮೆಯಾಗಿದೆ. ಜೊತೆಗೆ ಮೂರನೇ ಅಲೆಯ ಆತಂಕದೊಂದಿಗೆ ಡೆಲ್ಟಾ ಪ್ಲಸ್ ವೈರಾಣುವಿನ ಭಯ ಕೂಡ ಶುರುವಾಗಿದೆ. ಇತಂಹ ಸಮಯದಲ್ಲಿ ಬಿಎಂಟಿಸಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಮತ್ತೆ ಕೊರೊನಾ ಕೇಸ್ ಹೆಚ್ಚಾಗಲು ಕಾರಣವಾಗುವ ಸಾಧ್ಯತೆಯಿದೆ. ಈ ಬಗ್ಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಚಿವರು ಗಮನ ಅರಿಸಬೇಕು ಶೇ.100 ರಷ್ಟು ಪ್ರಯಾಣಿಕರು ಓಡಾಡಲು ಅನುವು ಮಾಡಿಕೊಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ