CrimeNEWSದೇಶ-ವಿದೇಶ

ಉಗ್ರರ ಮತ್ತೊಂದು ಸಂಚು ವಿಫಲ: ಭದ್ರತಾ ಪಡೆಗಳಿಂದ ಡ್ರೋಣ್ ಮೇಲೆ ಗುಂಡಿನ ದಾಳಿ

ವಿಜಯಪಥ ಸಮಗ್ರ ಸುದ್ದಿ

ಶ್ರೀನಗರ: ಭಾರತೀಯ ಸೇನಾಪಡೆ ಸೋಮವಾರ ಮತ್ತೊಮ್ಮೆ ಡ್ರೋಣ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ವಿಫಲಗೊಳಿಸಿದೆ. ಸೇನಾ ಕೇಂದ್ರದ ಬಳಿ ಪತ್ತೆಯಾದ ಡ್ರೋಣ್ ಒಂದರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಹಿಮ್ಮೆಟ್ಟಿಸಿದೆ ಎಂದು ತಿಳಿದುಬಂದಿದೆ.

ಭಾನುವಾರವಷ್ಟೇ ಭಾರತೀಯ ವಾಯುಪಡೆ ಕೇಂದ್ರದ ಮೇಲೆ ದಾಳಿ ನಡೆಸಿದ್ದ ಉಗ್ರರು ಇಂದು ಸೇನಾ ಶಿಬಿರವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಮುಂದಾಗಿದ್ದರು. ಇಂದು ಬೆಳಗಿನ ಜಾವ 3 ಗಂಟೆಗೆ ಕಾಲೂಚಕ್ ಮಿಲಿಟರಿ ಸ್ಟೇಷನ್ ಬಳಿ ಡ್ರೋನ್ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿದ್ದ ಸೇನೆ, 20 ರಿಂದ 25 ಸುತ್ತು ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಸೇನಾಪಡೆಗಳು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಡ್ರೋಣ್ ಮಾಯವಾಗಿದ್ದು, ಪ್ರಸ್ತುತ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದು ಕಾರ್ಯಾಚರಣೆ . ಭದ್ರತಾಪಡೆಗಳ ಗುಂಡಿನ ದಾಳಿಯಲ್ಲಿ ಡ್ರೋಣ್ ಹೊಡೆದುರುಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಡ್ರೋಣ್ ಗಳನ್ನು ಬಳಸಿಕೊಂಡು ಗಡಿಯಾಚೆಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಸ್ಫೋಟಕ ಪದಾರ್ಥ, ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಉಗ್ರರು ಇದೀಗ ಅದೇ ಡ್ರೋಣ್ ಬಳಸಿ ಜಮ್ಮು ಏರ್ಪೋರ್ಟ್ ನ ಒಂದು ಭಾಗದಲ್ಲಿರುವ ಭಾರತೀಯ ವಾಯುಪಡೆ ಸ್ಟೇಷನ್ ಮೇಲೆ ಭಾನುವಾರ ದಾಳಿ ನಡೆಸಿದ್ದರು. ಉಗ್ರರ ಈ ದುಷ್ಕೃತ್ಯ ಇದೀಗ ತೀವ್ರ ಆತಂಕವನ್ನು ಸೃಷ್ಟಿಸಿದೆ.

ಭಾನುವಾರ ನಸುಕಿನ ಜಾವ 1.40ರ ಸುಮಾರಿಗೆ ಸ್ಫೋಟಕಗಳನ್ನು ಕಟ್ಟಲಾಗಿದ್ದ 2 ಡ್ರೋಣ್’ಗಳು ವಾಯುಪಡೆ ಕೇಂದ್ರದ ಮೇಲೆ ದಾಳಿ ನಡೆಸಿದ್ದವು. ಪಾಕ್‌ ಸೇನೆ ಹಾಗೂ ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕುಮ್ಮಕ್ಕಿನಿಂದ ಜಿಪಿಎಸ್ ಹೊಂದಿದ್ದ ಡ್ರೋಣ್ ಗಳನ್ನು ಉಗ್ರರು ಬಳಸಿ ಸ್ಫೋಟಕ ಕಳಿಸಿರುವ ಶಂಕೆಗಳು ವ್ಯಕ್ತವಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?