ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಎಚ್.ವೆಂಕಟೇಶ್ ದೊಡ್ಡೇರಿ ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ನೆಲಮಂಗಲ ತಾಲೂಕಿನ ದಾಬಸ್‌ಪೇಟೆ, ತ್ಯಾಮಗೊಂಡ್ಲು ಮತ್ತು ನೆಲಮಂಗಲ ನಗರಗಳಿಗೆ ಎತ್ತಿನಹೊಳೆ ಯೋಜನೆಯಿಂದ ಕುಡಿಯುವ ನೀರು ಮತ್ತು ಕೆರೆಗಳಿಗೆ “ಊರಿಗೊಂದು ಕೆರೆ, ಆ ಕೆರೆಗೆ ನದಿಯ ನೀರು” ಯೋಜನೆಯಡಿ ಶಾಶ್ವತ ನೀರು ಸರಬರಾಜು ಮಾಡುವಂತೆ ಕೋರಿಯೂ ಮನವಿ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವಲೋಚನ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.