NEWSನಮ್ಮರಾಜ್ಯಶಿಕ್ಷಣ-

ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 2ನೇ ವಾರದಲ್ಲಿ ಪ್ರಕಟ : ಸಚಿವ ಸುರೇಶ್‌ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತೀವ್ರತೆ ಹೆಚ್ಚಾದ ಕಾರಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಒಟ್ಟಾರೆ ಎಲ್ಲಾ ವಿದ್ಯಾರ್ಥಿಥಿಗಳನ್ನು ಪಾಸ್‌ ಮಾಡಲಾಗುವುದು. ಇದರ ಜತೆಗೆ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಫಲಿತಾಂಶದಿಂದ ಅಸಾಮಾಧಾನಗೊಂಡ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವರ್ಗಾವಣೆ ಪ್ರಕ್ರಿಯೆ ಆರಂಭ
ಸ್ಥಗಿತಗೊಂಡಿದ್ದ 2020–21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಬುಧವಾರ (ಜೂನ್‌ 30) ಪ್ರಕಟವಾಗಲಿದ್ದು, ಅಂದೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ವಲಯ, ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಈಗಾಗಲೇ 75 ಸಾವಿರ ಅರ್ಜಿ ಸ್ವೀಕಾರ ಆಗಿದೆ. ಅವರಿಗೆ ಮೊದಲು ಕೌನ್ಸೆಲಿಂಗ್‌ ಪ್ರಕಿಯೆ ಆರಂಭವಾಗಲಿದೆ. ಹೊಸತಾಗಿ ಅರ್ಜಿ ಸಲ್ಲಿಸಿದವರಿಗೆ ಎರಡನೇ ಹಂತದಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಜು.1ರಿಂದ ಶಾಲೆಗಳಲ್ಲಿ ಆನ್‌ಲೈನ್‌ ತರಗತಿ
ಶಾಲಾ ಆರಂಭ ಕುರಿತು ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಈ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಜು.1ರಿಂದ ಶಾಲೆಗಳಲ್ಲಿ ಆನ್‌ಲೈನ್‌ ತರಗತಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಈ ಉದ್ದೇಶದಿಂದ ವಿಷಯ ಪರಿಣತರು, ತಾಂತ್ರಿಕ ಸಲಹೆ ಸಮಿತಿಯ ಸದಸ್ಯರು, ಮಕ್ಕಳ ತಜ್ಞರನ್ನು ಒಳಗೊಂಡ ಟಾಸ್ಕ್‌ ಫೋರ್ಸ್‌ (ಕಾರ್ಯಪಡೆ) ರಚಿಸಲಾಗುವುದ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದೂ ಹೇಳಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ