NEWSನಮ್ಮರಾಜ್ಯರಾಜಕೀಯ

ದಲಿತ ಸಿಎಂ ಕೂಗು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗು ಅಡಗಿಸುವುದು ದೊಡ್ಡ ಕೆಲಸವೇನಲ್ಲ: ಬಿಜೆಪಿ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್‌ ತಪ್ಪಿಸಿತ್ತು. ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ.ಇಬ್ರಾಹಿಂ ಹೇಳುತ್ತಿದ್ದಾರೆ. ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ, ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ. ಕಾಂಗ್ರೆಸ್‌ ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ! ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗುತ್ತಿದೆ! ಎಂದು ಹೇಳಲಾಗಿತ್ತು. ಇದೀಗ ನಿಜವಾಗುತ್ತಿದೆ ಎಂದು ತಿಳಿಸಿದೆ.

ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ದರಾಮಯ್ಯ ಅವರೇ, ಮಾಜಿ ಸಚಿವ ಮುನಿಯಪ್ಪ‌‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಿ ವ್ಯಂಗ್ಯವಾಡಿದರು.

ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಕುಟುಕಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್