NEWSದೇಶ-ವಿದೇಶವಿಜ್ಞಾನ

ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್ ಅಳವಡಿಕೆಗೆ 19,041 ಕೋಟಿ ರೂ. ಮೀಸಲು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಭಾರತ್ ನೆಟ್ ಪಿಪಿಪಿ ಮಾದರಿ ಮೂಲಕ ಪ್ರತಿ ಗ್ರಾಮಕ್ಕೆ ಬ್ರಾಡ್‌ಬ್ಯಾಂಡ್ ಕಲ್ಪಿಸಲು 19,041 ಕೋಟಿ ರೂ.ಗಳನ್ನು ಮೋದಿ ಸರ್ಕಾರ ಮೀಸಲಿಟ್ಟಿದೆ.

ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್‌ ವಿವರಿಸಿದ್ದು, 2,50,000 ಗ್ರಾಮ ಪಂಚಾಯಿತಿಗಳ ಪೈಕಿ, 1,56,223 ಗ್ರಾಮ ಪಂಚಾಯಿತಿಗಳಲ್ಲಿ 2021 ಮೇ 31 ರೊಳಗೆ ಸೇವೆ ಒದಗಿದಲಾಗಿದೆ. 16 ರಾಜ್ಯಗಳಲ್ಲಿ (9 ಪ್ಯಾಕೇಜ್ ಗಳಾಗಿ ಒಟ್ಟುಗೂಡಿಸಲಾಗಿದೆ) ಪಿಪಿಪಿ ಮಾದರಿಯಲ್ಲಿ ಭಾರತ್ ನೆಟ್ ಅನ್ನು ಕಾರ್ಯಸಾಧ್ಯತೆಯ ಆಧಾರದ ಮೇಲೆ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಅದಕ್ಕಾಗಿ ಹೆಚ್ಚುವರಿಯಾಗಿ 19,041 ಕೋಟಿ ರೂ. ಒದಗಿಸಲಾಗುವುದು. ಹೀಗಾಗಿ, ಭಾರತ್ ನೆಟ್ ಅಡಿಯಲ್ಲಿ ಒಟ್ಟು ವಿನಿಯೋಗವನ್ನು 61,109 ಕೋಟಿ ರೂ.ಗೆ ಹೆಚ್ಚಿಸಲಾಗುವುದು. ಇದು ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ಜನವಸತಿ ಗ್ರಾಮಗಳನ್ನು ಒಳಗೊಳ್ಳಲು ಭಾರತ್ ನೆಟ್ ವಿಸ್ತರಣೆ ಮತ್ತು ನವೀಕರಣಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಗಳ ಅನುಮೋದನೆಯ ಪ್ರಸ್ತುತ ಪ್ರಕ್ರಿಯೆಗಳು ದೀರ್ಘವಾಗಿವೆ ಮತ್ತು ಅನೇಕ ಹಂತದ ಅನುಮೋದನೆಯನ್ನು ಒಳಗೊಂಡಿವೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು