NEWSದೇಶ-ವಿದೇಶನಮ್ಮರಾಜ್ಯ

ಕೊರೊನಾದಿಂದ ಮೃತಪಟ್ಟ ಒಬ್ಬ ವ್ಯಕ್ತಿಗೆ ಲಕ್ಷ ರೂ. ಪರಿಹಾರ : ವಿಪತ್ತು ನಿಧಿ ನಿಯಮಕ್ಕೆ ವಿರುದ್ಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾದಿಂದ ಮೃತರಾದ ವ್ಯಕ್ತಿಗಳ ಕುಟುಂಬಕ್ಕೆ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮದಂತೆ ಪರಿಹಾರ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದರೂ‌ ಸುಪ್ರೀಮ್ ಕೋರ್ಟ್ ಪುರಸ್ಕರಿಸಿದೆ. ಈಗಲಾದರೂ ಕೇಂದ್ರ ಮತ್ತು ರಾಜ್ಯ‌ಸರ್ಕಾರ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ನಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ಒತ್ತಾಯಿಸಿದ್ದಾರೆ.

ಒಂದು‌ ಕುಟುಂಬದಲ್ಲಿ ಕೊರೊನಾದಿಂದ ಸಾವಿಗೀಡಾದ ಒಬ್ಬ ವ್ಯಕ್ತಿಗೆ ಮಾತ್ರ ಒಂದು‌ ಲಕ್ಷ ರೂಪಾಯಿ ಪರಿಹಾರ ನೀಡುವ ರಾಜ್ಯ ಸರ್ಕಾರದ ನಿರ್ಧಾರ ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯ ನಿಯಮಗಳಿಗೆ ವಿರುದ್ಧವಾಗಿದೆ ಎಂಬ ನಮ್ಮ ವಾದಕ್ಕೆ ಸುಪ್ರೀಮ್ ಕೋರ್ಟ್‌ ಸಹಮತ ವ್ಯಕ್ತಪಡಿಸಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

ಕೊರೊನಾದಿಂದ ಮೃತಪಟ್ಟವರಿಗೆ ‌ಪರಿಹಾರ ನೀಡಲು ಆರು ವಾರಗಳೊಳಗೆ ಮಾರ್ಗದರ್ಶಿ ಸೂತ್ರವನ್ನು ಸಿದ್ಧ ಪಡಿಸಬೇಕೆಂದು ಸುಪ್ರೀಮ್ ಕೋರ್ಟ್ ನೀಡಿರುವ ಆದೇಶವನ್ನು ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ ಗಂಭೀರವಾಗಿ ಪರಿಗಣಿಸಿ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುಪ್ರೀಮ್ ಕೋರ್ಟ್ ಆದೇಶದನ್ವಯ ಕೊರೊನಾದಿಂದ‌ ಮೃತ ಪಟ್ಟವರಿಗೆಲ್ಲರಿಗೂ ಪರಿಹಾರ ಸಿಗಬೇಕಾದರೆ‌ ಸಾವಿನ‌‌ ನಿಖರವಾದ ಸಂಖ್ಯೆ‌ ಲಭ್ಯ ಇರಬೇಕಾಗುತ್ತದೆ. ಇದಕ್ಕಾಗಿ‌ ಕೊರೊನಾ ಸಾವಿನ ಮರುಸಮೀಕ್ಷೆ ನಡೆಸಬೇಕೆಂದು ರಾಜ್ಯ ಸರ್ಕಾರವನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ