ಜೇವರ್ಗಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಫುಡ್ ಪಾರ್ಕ್ನ ರಸ್ತೆಗಳ ಕಾಮಗಾರಿ ಸಂಪೂರ್ಣ ಕಳಪೆಯಾಗಿ ನಡೆಯುತ್ತಿದೆ.
ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾದ ಫುಡ್ ಪಾರ್ಕ್ ನಿರ್ಮಾಣ ಕಾಮಗಾರಿ ಇತ್ತೀಚೆಗೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಮಾಡಿದ ರಸ್ತೆಗಳು ಕೇವಲ ತಿಂಗಳಲ್ಲಿ ಜೆಲ್ಲಿ ಕಲ್ಲುಗಳು ತೇಲಿ ಡಾಂಬರು ರಸ್ತೆ ಸಂಪೂರ್ಣ ಕಿತ್ತು ಹೋಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಈ ರಸ್ತೆಗಳಿಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.