NEWSನಮ್ಮರಾಜ್ಯಶಿಕ್ಷಣ-

ಮೀಸಲಾತಿಯಡಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಅವಕಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಮೀಸಲಾತಿ ಕಲ್ಪಿಸಲಾಗಿದೆ. ಹೀಗಾಗಿ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಸೀಟು ಮೀಸಲಾತಿಯಡಿ ಪ್ರವೇಶ ಪಡೆಯಬಹುದಾಗಿದೆ. ಈ ಬಗ್ಗೆ ಹೆಚ್ಚು ಪ್ರಚಾರ ಮಾಡಲು ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ಕ್ರಾಫರ್ಡ್ ಭವನದ ಸಿಂಡಿಕೇಟ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಲು ಇಚ್ಛಿಸುವ ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಕಳೆದ ಕೆಲ ವರ್ಷಗಳಿಂದಲೂ ಸೀಟು ಮೀಸಲಿರಿಸಲಾಗಿದೆ.

ಆದರೆ, ಈ ಬಗ್ಗೆ ಹೆಚ್ಚಿನ ಪ್ರಚಾರ ಇಲ್ಲದ ಕಾರಣ ತೃತೀಯ ಲಿಂಗಿಗಳು ಇದರ ಪ್ರಯೋಜನ ಪಡೆಯಲು ವಿಫಲರಾಗುತ್ತಿದ್ದಾರೆ. ಆದ್ದರಿಂದ ಸೀಟು ಮೀಸಲು ಕುರಿತು ಹೆಚ್ಚಿನ ಪ್ರಚಾರ ಮಾಡುವಂತೆ ಸಿಂಡಿಕೇಟ್ ಸದಸ್ಯೆ ಡಾ. ಚೈತ್ರ ನಾರಾಯಣ್ ಪ್ರಸ್ತಾವನೆ ಸಲ್ಲಿಸಿದ್ದರು. ಈ ಬಗ್ಗೆ ಚರ್ಚಿಸಿದ ಸಿಂಡಿಕೇಟ್, ತೃತೀಯ ಲಿಂಗಿಗಳಿಗೆ ಸೀಟು ಮೀಸಲಿಟ್ಟಿರುವ ಬಗ್ಗೆ ಅಗತ್ಯ ಪ್ರಚಾರ ಕೈಗೊಂಡು ಯೋಜನೆ ಉದ್ದೇಶ ಕೈಗೂಡಲು ಸಹಕರಿಸುವಂತೆ ಸಲಹೆ ನೀಡಿದರು.

ವಿವಿ, ವಿದ್ಯಾರ್ಥಿಗಳ ಪ್ರವೇಶಾತಿ ಸಂದರ್ಭದಲ್ಲಿ ಈ ಸೀಟು ಮೀಸಲು ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ತೀರ್ಮಾನ ತೆಗೆದುಕೊಂಡಿತು ಎಂದು ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ