NEWSಕೃಷಿನಮ್ಮರಾಜ್ಯ

ಭೈರಮಂಗಲ ಜಲಾಶಯದ ಬಲದಂಡೆ ನಾಲಾ ಕಾಮಗಾರಿ ಒಂದೂವರೆ ತಿಂಗಳಲ್ಲಿ ಪೂರ್ಣ: ಸಚಿವ ಮಾಧುಸ್ವಾಮಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಭೈರಮಂಗಲ ಜಲಾಶಯದ ಬಲದಂಡೆ ನಾಲೆಗಳ ಅಭಿವೃದ್ಧಿ ಕಾಮಗಾರಿ ಶೇ.70 ಪೂರ್ಣವಾಗಿದ್ದು, ಒಂದೂವರೆ ತಿಂಗಳೊಳಗೆ ಕೆಲಸ ಪೂರ್ಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಭೈರಮಂಗಲ ಜಲಾಶಯದ ಕಾಮಗಾರಿಗಳನ್ನು ಪರಿವೀಕ್ಷಿಸಿದ ನಂತರ ಮಾತನಾಡಿ, ಬಲದಂಡೆ ನಾಲಾ ಕಾಮಗಾರಿ ಪೂರ್ಣಗೊಂಡ ನಂತರ ಎಡದಂಡೆ ನಾಲಾ ಕಾಮಗಾರಿ ಪ್ರಾರಂಭಿಸಲಾಗುವುದು. ಕಾಮಗಾರಿ ಕೈಗೊಳ್ಳಲು ಯಾವುದೇ ರೀತಿಯ ತೊಂದರೆ ಇಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ನಿಧಾನವಾಗಿರಬಹುದು. ಒಂದು ವರ್ಷದೊಳಗಾಗಿ ಎರಡು ನಾಲೆಗಳ ಕೆಲಸ ಪೂರ್ಣಗೊಳಿಸಲಾಗುವುದು ಎಂದರು.

ಈ ಯೋಜನೆಯ ಬಗ್ಗೆ ಚರ್ಚಿಸಲಾಗುತ್ತಿದೆ. ಸಿವೇಜ್ ಹಾಗೂ ಟ್ರೀಟ್ ಮೆಂಟ್ ನಂತರ ಎಷ್ಟು ನೀರು ಸಿಗುತ್ತದೆ ಎಂದು ಅಂದಾಜಿಸಬೇಕು. ಸದ್ಯದ ಸ್ಥಿತಿಯಲ್ಲಿ 4000 ಎಕರೆಗೆ ನೀರು ನೀಡಬಹುದು ಎಂದರು.

ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಸುಮಾರು 100 ಕೆರೆಗಳಿದ್ದು, ಸಣ್ಣ ನೀರಾವರಿ ಇಲಾಖೆಯಿಂದ ಅಭಿವೃದ್ಧಿ ಪಡಿಸುವಂತೆ ಕೋರಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು.

100 ಎಕರೆಗಿಂತ ಅಚ್ಚುಕಟ್ಟು ಪ್ರದೇಶಕ್ಕಿಂತ ಹೆಚ್ಚಿರುವ ಕೆರೆಗಳು ಮಾತ್ರ ಸಣ್ಣ ನೀರಾವರಿ ಇಲಾಖೆಯಿಂದ ಪುನಶ್ಚೇತನಗೊಳಿಸಬಹುದು. ಸಣ್ಣ ಕೆರೆಗಳು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಬರಲಿದ್ದು, ಜಿಲ್ಲಾ ಪಂಚಾಯತ್ ಅವರು ಸಣ್ಣ ನೀರಾವರಿ ಇಲಾಖೆಗೆ ನೀಡಿದರೆ ಅಭಿವೃದ್ಧಿ ಪಡಿಸಿಕೊಡಲಾಗುವುದು‌ ಎಂದರು.

ಭೈರಮಂಗಲ ಜಲಾಶಯದ ಎಡದಂಡೆ ಕಾಲುವೆಯ ಉದ್ದ 26 ಕಿ.ಮೀ ಮತ್ತು ಬಲದಂಡೆಯ ಕಾಲುವೆಯ ಉದ್ದ 9 ಕಿ.ಮೀ ನ್ನು ಆರ್.ಸಿ.ಸಿ ಬಾಕ್ಸ್ ಟೈಪ್ ಕಾಲುವೆಯ ನಿರ್ಮಾಣ ಕಾಮಗಾರಿಯನ್ನು 129 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿದ್ದು, ಕಾಮಗಾರಿಯನ್ನು ಸಚಿವರು ಪರಿವೀಕ್ಷಿಸಿದರು.

ಮಾಗಡಿ ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ, ಸಣ್ಣ ನೀರಾವರಿ ಇಲಾಖೆ ಅಭಿಯಂತರ ಕೊಟ್ರೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ