NEWSನಮ್ಮರಾಜ್ಯರಾಜಕೀಯ

ಮಂಜೇಶ್ವರ : ತೈಲ ಬೆಲೆ ಏರಿಕೆ, ಕೇಂದ್ರ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮಂಜೇಶ್ವರ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ.

ಯೂತ್ ಕಾಂಗ್ರೆಸ್ ಮಂಜೇಶ್ವರ ವಿಧಾನಸಭಾ ಸಮಿತಿಯ ವತಿಯಿಂದ ಹೊಸಂಗಡಿ ಚೆಕ್ ಪೋಸ್ಟ್ ಬಳಿಯ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ನಿತ್ಯ ಇಂಧನ ಬೆಲೆ ಏರಿಸುತ್ತಿರುವ ಇಂಥ ಸರ್ಕಾರ ನಮಗೆ ಬೇಕೆ ಎಂದು ಕಿಡಿಕಾರಿದರು.

ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇರ್ಷಾದ್ ಮಂಜೇಶ್ವರ, ಮೀಂಜ ಮಂಡಲ ಕಾಂಗ್ರೆಸ್ ಅಧ್ಯಕ್ಷ ಸಂಕಬೈಲು ಸತೀಶ ಅಡಪ್ಪ, ಕಾಂಗ್ರೆಸ್ ಮುಖಂಡರಾದ ದಿವಾಕರ ಎಸ್. ಜೆ, ಇಕ್ಬಾಲ್ ಕಳಿಯೂರು, ಜಗದೀಶ್ ಮೂಡಂಬೈಲು , ಆರಿಫ್ ಮಚ್ಚಂಪಾಡಿ, ಕಲೀಲ್ ಬಜಾಲ್ , ಅಜೀಜ್ ಕಲ್ಲೂರು, ಯಾಕೂಬ್ ಮಚ್ಚಂಪಾಡಿ, ಮುವಾಸ್ ಮತ್ತಿತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ