NEWSನಮ್ಮಜಿಲ್ಲೆನಮ್ಮರಾಜ್ಯ

ಅಡುಗೆ ಅನಿಲ ಇಂದಿನಿಂದ ಇನ್ನಷ್ಟು ತುಟ್ಟಿ: ಬೆಲೆ ಏರಿಕೆಯಿಂದ ಹೈರಾಣಾಗುತ್ತಿರುವ ಜನತೆ

ಬೆಂಗಳೂರಿನಲ್ಲಿ 14.2 ಕೆಜಿ ಗ್ಯಾಸ್‌ ಸಿಲಿಂಡರ್‌ಗೆ 837.5 ರೂಪಾಯಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಮೊದಲನೇ, ಎರಡನೇ ಅಲೆಯಿಂದ ಹಾಗೂ ಇಂಧನ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆಯಿಂದ ಈಗಾಗಲೇ ತತ್ತರಿಸಿ ಹೋಗಿರುವ ನಾಡಿನ ಜನತೆಗೆ ಮತ್ತೆ ಗ್ಯಾಸ್‌ ಸಿಲಿಂಡರ್‌ ದರ ಏರಿಸುವ ಮೂಲಕ ಶಾಕ್‌ ಕೊಟ್ಟಿದೆ.

ತೈಲ ಮಾರುಕಟ್ಟೆ ಕಂಪನಿಗಳು (OMCs) ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 14.2 ಕೆಜಿ ಅಡುಗೆ ಅನಿಲದ ಸಿಲಿಂಡರ್‌ನ ಬೆಲೆಯನ್ನು 25.50 ರೂ.ಗೆ ಹೆಚ್ಚಿಸಿದ್ದು, 2021 ರಲ್ಲಿ ಇದು ನಾಲ್ಕನೇ ಬಾರಿಯ ದರ ಏರಿಕೆಯಾಗಿದೆ.

ಈ ವರ್ಷದ ಜನವರಿ, ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿ ಕ್ರಮವಾಗಿ 25 ರೂ.ಗಳಂತೆ ದರ ಏರಿಕೆಯಾಗಿತ್ತು. ಏಪ್ರಿಲ್‌ ತಿಂಗಳಿನಲ್ಲೂ 10 ರೂ. ಏರಿಸಲಾಗಿತ್ತು. ಮೇ ಹಾಗೂ ಜೂನ್‌ ತಿಂಗಳಲ್ಲಿ ಯಾವುದೇ ಬೆಲೆ ಏರಿಕೆ ಆಗದಿದ್ದರೂ, ಇದೀಗ ಮತ್ತೆ 25 ರೂ.ಗಳಷ್ಟು ಏರಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಬೆಂಗಳೂರಿನಲ್ಲಿ ಈಗ 14.2 ಕೆಜಿ ಗ್ಯಾಸ್‌ ಸಿಲಿಂಡರ್‌ಗೆ 837.50 ರೂ. ಹಾಗೆಯೇ ದೆಹಲಿ ಮತ್ತು ಮುಂಬೈನ ಜನರು 14.2 ಕೆಜಿ ಸಿಲಿಂಡರ್‌ಗೆ 834.50 ರೂ ತೆರುತ್ತಿದ್ದಾರೆ. ಇನ್ನು ಕೋಲ್ಕತ್ತಾದ ನಾಗರಿಕರು ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್‌ಗೆ 861 ರೂ. ಹಾಗೂ ಚೆನ್ನೈನಲ್ಲಿ 850.50 ರೂ.ಗಳನ್ನು ತೆರಬೇಕಾಗಿದೆ.

ಇನ್ನು, 19 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 76 ರೂ.ಗೆ ಹೆಚ್ಚಿಸಲಾಗಿದೆ. ಈ ಹೆಚ್ಚಳದಿಂದ ದೆಹಲಿ ನಿವಾಸಿಗಳು ಈಗ 19 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್‌ಗೆ 1,550 ರೂ. ಪಾವತಿಸಬೇಕಿದೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ