NEWSಆರೋಗ್ಯರಾಜಕೀಯ

ವೈದ್ಯರಿಗೆ ತಕ್ಷಣ ವೇತನ ನೀಡಿ ಗೌರವದಿಂದ ನಡೆದುಕೊಳ್ಳಿ: ಡಾ. ವಿಶ್ವನಾಥ್ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದ್ಯಾಂತ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಲ್ಲಿರುವ ವೈದ್ಯರಿಗೆ ನಾಲ್ಕು ತಿಂಗಳಿಂದ ವೇತನವನ್ನು ನೀಡದೆ ಕರ್ನಾಟಕದ ಸರಕಾರ ಸತಾಯಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ವೇತನ ನೀಡದೆ ವೈದ್ಯರಿಗೆ ಹಿಂಸೆ ನೀಡುತ್ತಿರುವ ಸರ್ಕಾರದ ಈ ನಡೆ ಅಮಾನವೀಯ ಎಂದು ಆಮ್ ಆದ್ಮಿ ಪಾರ್ಟಿಯ ವೈದ್ಯಕೀಯ ಘಟಕದ ಅಧ್ಯಕ್ಷ ಮತ್ತು ವೈದ್ಯ ಡಾ. ವಿಶ್ವನಾಥ್ ಟೀಕಿಸಿದರು.

ಕರ್ನಾಟಕ ಅಸೋಸಿಯೇಷನ್ ಫಾರ್ ರೆಸಿಡೆಂಟ್ ಡಾಕ್ಟರ್ಸ್ (KARD) ಈ ಕುರಿತು ಒಂದು ಪಟ್ಟಿಯನ್ನು ನೀಡಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 16 ಆಸ್ಪತ್ರೆಗಳು ಮತ್ತು ಆರೋಗ್ಯ ಇಲಾಖೆ ಅಡಿಯಲ್ಲಿ ಬರುವ 53 ಆಸ್ಪತ್ರೆಗಳ ವೈದ್ಯರಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. ಇವರು ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಒಂದು ವಾರದ ಒಳಗೆ ವೇತನವನ್ನು ನೀಡುವುದಾಗಿ ಹೇಳಿಕೆ ನೀಡಿದ್ದರೂ ಇನ್ನೂ ಅದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಡಾ. ವಿಶ್ವನಾಥ್ ಆರೋಪಿಸಿದರು.

ಜಯನಗರ ಅಸೆಂಬ್ಲಿಯ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಸೇವೆ ಮಾಡಿ ಮಡಿದ ವೈದ್ಯರ ಕುಟುಂಬಕ್ಕೆ ಒಂದು ಕೋಟಿ ರೂ.ಗಳ ಪರಿಹಾರ ನೀಡುತ್ತಿದೆ. ಕರ್ನಾಟಕ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರಿಗೆ ಪಿಪಿಇ ಕಿಟ್ ಕೂಡ ನೀಡಿರಲಿಲ್ಲ. ಅಲ್ಲದೇ ವೇತನವನ್ನೇ ನೀಡದೆ ಜೀತದಾಳುಗಳಂತೆ ನಡೆಸಿಕೊಳ್ಳುತ್ತಿದೆ ಟೀಕಿಸಿದರು.

ಆಮ್ ಆದ್ಮಿ ಪಾರ್ಟಿಯ ಹಿರಿಯ ಮುಖಂಡ ಡಾ. ರಮೇಶ್, ವೈದ್ಯರ ಕರ್ತವ್ಯದ ಮಧ್ಯೆ ಮೂಗು ತೋರಿಸದೆ ಅವರಿಗೆ ಗೌರವ ನೀಡಬೇಕು ಎಂದು ತಿಳಿಸಿದರು.

ಆಸ್ಪತ್ರೆಗಳಲ್ಲಿ ವೈದ್ಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ರೋಗಿಗಳು, ಅವರ ಕುಟುಂಬಸ್ಥರು, ಸ್ಥಳೀಯ ರಾಜಕೀಯ ನಾಯಕರು ವೈದ್ಯರ ಮೇಲೆ ಕೆಲಸದ ಸಮಯದಲ್ಲಿ ನಡೆಸುತ್ತಿರುವ ಹಲ್ಲೆಗಳು ವರದಿಯಾಗುತ್ತಿವೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರಕಾರ ಶೇ.70 ವೈದ್ಯರು ಈ ಸಮಸ್ಯೆಗಳನ್ನು ಎದುರಿಸುತ್ತಾರೆ. ವೈದ್ಯರಿಗೆ ಗೌರವಯುತವಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡುವುದೇ ಅವರಿಗೆ ವೈದ್ಯರ ದಿನದಂದು ನೀಡುವ ಗೌರವ ಎಂದು ಕೆ.ಆರ್. ಪುರಂ ನ ಆಮ್ ಆದ್ಮಿ ಪಾರ್ಟಿಯ ಉಸ್ತುವಾರಿ ಡಾ. ಕೇಶವ್ ಅಭಿಪ್ರಾಯ ಪಟ್ಟರು.

ಕರ್ನಾಟಕ ಸರಕಾರ ಕೊರೋನ ಸಂದರ್ಭದಲ್ಲಿ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಮಾಡುತ್ತಿರುವ ವೈದ್ಯರಿಗೆ ತಕ್ಷಣ ವೇತನವನ್ನು ನೀಡಬೇಕು. ದೆಹಲಿ ಸರಕಾರ ನೀಡುವಂತೆ ಕರ್ನಾಟಕದಲ್ಲಿ ಕೊರೋನ ಸೇವೆಯಲ್ಲಿ ಮಾಡಿದ ವೈದ್ಯರಿಗೆ ಪರಿಹಾರ ನೀಡಿ. ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.

Leave a Reply

error: Content is protected !!
LATEST
KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ