NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯಗಳ ನೋವಿನ ಮೇಲೆ ಕೇಂದ್ರದ ಜಿಎಸ್‌ಟಿ ಸಂಭ್ರಮ: ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಿಎಸ್‌ಟಿಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ 9 ಸಾವಿರ ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕಿಡಿಕಾರಿದರು.

ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪಾರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ ಎಂದು ಪ್ರಶನಿಸಿದರು.

ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ