ಜೇವರ್ಗಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕುಗಳ ಅಭಿವೃದ್ಧಿಗೆ ತಾವೂ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಹಾಗೂ ವಿಪಕ್ಷದ ಮುಖ್ಯ ಸಚೇತಕ ಡಾ.ಅಜಯಸಿಂಗ್ ಹೇಳಿದ್ದಾರೆ.
ಇಂದು ತಾಲೂಕಿನ ಆಂದೋಲಾ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆಯಲ್ಲಿ ಗುಡೂರ ಎಸ್.ಎ. ಗ್ರಾಮದಿಂದ ಗಂವಾರ ವಾಯಾ ಆಂದೋಲಾ ಗ್ರಾಮದವರೆಗೆ ರಸ್ತೆ ನಿರ್ಮಾಣ ಮತ್ತು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.
ಈಗಾಗಲೇ ತಾಲೂಕಿನಲ್ಲಿ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕೊಡುವ ಕಾರ್ಯಕ್ರಮ ರೂಪಿಸಿ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡುತ್ತೇನೆ ಎಂದರು.
ಆಂದೋಲಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಸ್ತೂರಿಬಾಯಿ ಕಲ್ಯಾಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಪಾಟೀಲ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜಗೌಡ ಪೊಲೀಸ್ ಪಾಟೀಲ, ಗೌಡಪ್ಪಗೌಡ ಪಾಟೀಲ, ಸಂಗಣಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಖಾಸಿಂಪಟೇಲ ಮುಧೋಳ, ಚಂದ್ರಶೇಖರ ಹರನಾಳ, ಶೌಕತಅಲಿ ಆಲೂರ, ಮರೆಪ್ಪ ಸರಡಗಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.