NEWSನಮ್ಮರಾಜ್ಯ

ವರ್ಗಾವಣೆಗೊಂಡ ಎರಡೇ ದಿನದಲ್ಲಿ ಮತ್ತೆ ಬಿಎಂಟಿಸಿ ಎಂಡಿಯಾಗಿ ಶಿಖಾ ಮರು ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಅವರನ್ನು ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಳಿಸಿದ ಎರಡೇ ದಿನದಲ್ಲಿ ಮತ್ತೆ ಬಿಎಂಟಿಸಿ ಎಂಡಿಯಾಗಿ ಮರು ನೇಮಕ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಸಿ. ಶಿಖಾ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ಮಂಗಳವಾರವಷ್ಟೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಎರಡೇ ದಿನದಲ್ಲಿ ಮತ್ತೆ ಶಿಖಾ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಮರು ನೇಮಕ ಮಾಡಿದೆ.

ಜುಲೈ 1ರಂದು ಸಾರಿಗೆ ನೌಕರರ ವಜಾ, ವರ್ಗಾವಣೆ , ಅಮಾನತು ಸೇರಿದಂತೆ ಇತರ ಪ್ರಕರಣಗಳ ವಿಚಾರಣೆ ಹೈ ಕೋರ್ಟ್‌ನಲ್ಲಿ ಇತ್ತು. ಅದು ನಿನ್ನೆ ಮುಗಿದು ಮತ್ತೆ ಜುಲೈ 16ಕ್ಕೆ ಪ್ರಕರಣದ ವಿಚಾರಣೆ ಮುಂದೂಡಲ್ಪಟ್ಟಿದೆ. ಆದರೆ ವಿಚಾರಣೆ ನಡೆದ ಮರುದಿನವೇ ಮತ್ತೆ ಅದೇ ಸ್ಥಳಕ್ಕೆ ಶಿಖಾ ಅವರನ್ನು ನಿಯೋಜನೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದು ನೌಕರರ ಹಿತಕ್ಕಿಂತ ಸರ್ಕಾರದ ಪ್ರತಿಷ್ಠೆಯೇ ಹೆಚ್ಚಾಯಿತು ಎಂಬಂತೆ ತೋರುತ್ತಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು