ಬೆಂಗಳೂರು: ಕೊರೊನಾ ಮಹಾಮಾರಿಯಿಂದ ಶಾಲೆಗಳನ್ನು ತೆರೆಯಲು ಸಾಧ್ಯವಾಗದೆ ಶಿಕ್ಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಈ ಹಿನ್ನೆಲೆಯಲ್ಲಿ ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಅಡಿ ತಲಾ 5,000 ರೂ. ನೀಡಲು ಆದೇಶ ಹೊರಡಿಸಲಾಗಿದೆ.
ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿ ಒಳಗೊಂಡಂತೆ ಒಟ್ಟಾರೆ 2,06,945 ಸಿಬ್ಬಂದಿಗೆ ತಲಾ 5,000 ರೂ. ನೀಡಲು 103.47 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲು ಸೂಚಿಸಲಾಗಿದೆ.
ಇದಕ್ಕೆ ಆರ್ಟಿಇ ಅಡಿಯ ಖಾಸಗಿ ಶಾಲೆಗಳ ಶುಲ್ಕ ಮರುಪಾವತಿ ಕಾರ್ಯಕ್ರಮ ಅಡಿ ಒದಗಿಸಲಾದ ಅನುದಾನದಿಂದ ಭರಿಸಲಾಗುವುದು. ಪರಿಹಾರದ ಮೊತ್ತವನ್ನು ಅರ್ಹ ಫಲಾನುಭವಿಗಳ ಖಾತೆಗೇ ಜಮೆ ಮಾಡಲಾಗುವುದು. ಅದಕ್ಕೂ ಮೊದಲು ಅವರು ಬ್ಯಾಂಕ್ ಖಾತೆಯನ್ನು ಆಧಾರ್ಗೆ ಜೋಡಣೆ ಮಾಡಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.