Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ಮುಷ್ಕರದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರ ಏಕೆ ಬಂಧಿಸಿಲ್ಲ: ಹೈ ಕೋರ್ಟ್‌ ಪ್ರಶ್ನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಡಿಸೆಂಬರ್‌ನಲ್ಲಿ ನಡೆದ ಸಾರಿಗೆ ನೌಕರರ ಮುಷ್ಕರದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರನ್ನು ಏಕೆ ಪತ್ತೆ ಹಚ್ಚಿ ಬಂಧಿಸಿಲ್ಲ ಎಂದು ಸರ್ಕಾರವನ್ನು ಹೈ ಕೋರ್ಟ್‌ ಪ್ರಶ್ನಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಾರಿಗೆ ಮುಷ್ಕರದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರಿಂದಲೇ ನಷ್ಟದ ಮೊತ್ತವನ್ನು ವಸೂಲಿ ಮಾಡಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಮರ್ಪಣಾ ಸಾಂಸ್ಕೃತಿಕ ಸಾಮಾಜಿಕ ಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಶುಕ್ರವಾರ ವಿಚಾರಣೆಗೆ ಬಂದಾಗ ಸರ್ಕಾರಿ ವಕೀಲರು ಹಾಜರಾಗಿ, ಮುಷ್ಕರದ ವೇಳೆ ನಡೆದ ದಾಂಧಲೆಗೆ ಸಂಬಂಧಿಸಿದಂತೆ ದಾಖಲಿಸಿದ ಹತ್ತು ಪ್ರಕರಣಗಳ ಕುರಿತ ತನಿಖೆಯ ವಿವರ ಒಳಗೊಂಡ ವರದಿಯನ್ನು ಸಲ್ಲಿಸಿದರು.

ವರಿದಿ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ನೇತೃತ್ವದ ವಿಭಾಗಿಯ ಪೀಠ, ಒಂದು ಪ್ರಕರಣದಲ್ಲಿ ಸಿ ರಿಪೋರ್ಟ್ ಸಲ್ಲಿಸಲಾಗಿದೆ, ಉಳಿದ ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ. ಆದರೆ ಸಿಸಿ ಕ್ಯಾಮರಾ ದೃಶ್ಯಾವಳಿ ಇದ್ದರೂ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಏಕೆ ಸಾಧ್ಯವಾಗಿಲ್ಲ, ಕಲ್ಲು ಹೊಡೆಯುವವರನ್ನು ಏಕೆ ಬಂದಿಲ್ಲ? ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಕಂಡಿರಬೇಕು ಅಲ್ಲವೇ ಎಂದು ಪ್ರಶ್ನಿಸಿತು.

ಅದಕ್ಕೆ ಸರ್ಕಾರಿ ವಕೀಲರು ಉತ್ತರಿಸಿ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿಲ್ಲ, ಹೀಗಾಗಿ ತಪ್ಪಿತಸ್ಥರನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ. ಆದರೂ ತನಿಖೆ ಮುಂದುವರಿದಿದೆ ಎಂದು ತಿಳಿಸಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ ಪ್ರಕರಣ ಸಂಬಂಧ ಆ.12 ರೊಳಗೆ ವರದಿಯನ್ನು ಸಲ್ಲಿಸುವಂತೆ ಹೇಳಿ ವಿಚಾರಣೆಯನ್ನು ಮುಂದೂಡಿತು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ