NEWSನಮ್ಮರಾಜ್ಯರಾಜಕೀಯ

ಭ್ರಷ್ಟಾಚಾರಿಗಳ ಪರ ಸಿಎಂ ಚಿತಾವಣೆ ಖಂಡಿಸಿ ಸಿಸಿಬಿ ಕಚೇರಿ ಮುಂದೆ ಎಎಪಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ರಾಜ್ಯದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರ ಆಪ್ತ ಸಹಾಯಕನನ್ನು ಕೋಟ್ಯಂತರ ರೂ.ಗಳ ಆರ್ಥಿಕ ಅಪರಾಧದಲ್ಲಿ ಬಂಧಿಸಿ ನಂತರ ಮುಖ್ಯಮಂತ್ರಿಗಳ ಒತ್ತಡದಿಂದ ಆರೋಪಿಯನ್ನು ಗೃಹ ಇಲಾಖೆಯ ಬಿಡುಗಡೆ ಮಾಡಿತು.

ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಪ್ರಭಾವಿ ಮಂತ್ರಿಗಳು ತಮ್ಮ ಸ್ವೇಚ್ಛಾಚಾರಕ್ಕೆ ಗೃಹ ಇಲಾಖೆಯನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಶನಿವಾರ ಬೆಂಗಳೂರು ನಗರದ ಮೈಸೂರು ರಸ್ತೆಯಲ್ಲಿ ಇರುವ ಸಿಸಿಬಿ (ಕೇಂದ್ರ ಅಪರಾಧ ದಳ) ಕಚೇರಿಯ ಎದುರು ನಡೆಸಿದ ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ಸದಂ, ರಾಜ್ಯದಲ್ಲಿ ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಸ್ಥರಿಗೆ ಒಂದು ನ್ಯಾಯ. ಭ್ರಷ್ಟರನ್ನು ಬಂಧಿಸಬೇಕಾದ ಪೊಲೀಸ್ ಇಲಾಖೆಯನ್ನು ರಾಜ್ಯ ಸರಕಾರ ದುರ್ಬಳಕೆ ಮಾಡಿಕೊಂಡು ಸಾಂವಿಧಾನಿಕವಾಗಿ ಪ್ರತಿಭಟನೆ ಮಾಡುವ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದು ಖಂಡನೀಯ ಎಂದು ಕಿಡಿಕಾರಿದರು.

ಈ ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದ ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಅವರು ಆರೋಪಿ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಮರು ಬಂಧನ ಆಗಲೇಬೇಕು, ಇದರ ಜೊತೆಗೆ ಮುಖ್ಯಮಂತ್ರಿಗಳ ಮಗ ವಿಜಯೇಂದ್ರ ಅವರ ವಿಚಾರಣೆಯು ಸಹ ಮಾಡಬೇಕು. ನಾವು ಶಾಂತಿಯುತವಾದ ಪ್ರತಿಭಟನೆ ಮೂಲಕ ಅಗ್ರಹಿಸಿದರೆ ರಾಜ್ಯ ಸರಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸಿ ನಾಚಿಕೆ ಬಿಟ್ಟು ಪ್ರತಿಭಟನಾಕಾರರನ್ನು ಬಂಧಿಸಿದೆ ಎಂದು ಆರೋಪಿಸಿದರು.

ಆದಾಯ ತೆರಿಗೆ ಇಲಾಖೆ ಜಾರಿ ನಿರ್ದೇಶನಾಲಯಗಳ ಮೂಲಕವೂ ಸಹ ಪ್ರಭಾವಿಗಳ ಅಕ್ರಮಗಳು ಹೊರಬರಬೇಕಿದೆ . ಈ ರೀತಿಯ ಬೃಹತ್ ಹಗರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ. ಈ ಹಗರಣವದ ನಿಷ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಘಟಕದ ಅಧ್ಯಕ್ಷ ಬಿ.ಟಿ.ನಾಗಣ್ಣ ಆಗ್ರಹಿಸಿದರು.

ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ , ಉಷಾ ಮೋಹನ್, ಪ್ರಕಾಶ್ ನಾಗರಾಜ್, ಶಿಲ್ಪ ಬಿ, ಗೋಪಿನಾಥ್ ಮೊದಲಾದ ಮುಖಂಡರ ಜೊತೆಗೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...