NEWSನಮ್ಮರಾಜ್ಯರಾಜಕೀಯ

ಪ್ರಳಯವಾದರೂ ಆ 14 ಮಂದಿಯನ್ನು ಮತ್ತೆ ಸೇರಿಸಿಕೊಳ್ಳೊಲ್ಲ ಎಂದಿದ್ದು ನಿಜ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈತ್ರಿ ಸರ್ಕಾರ ಕೆಡವಿ, ಪಕ್ಷ ಬಿಟ್ಟು ಹೋದ 14 ಮಂದಿಯನ್ನು ಪ್ರಳಯವಾದರೂ ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದು ನಿಜ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಕ್ಷ ಬಿಟ್ಟು ಹೋದ 14 ಶಾಸಕರು ಮಾತ್ರವಲ್ಲ, ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮೈತ್ರಿ ಸರ್ಕಾರ ಕೆಡವಿ, ಪಕ್ಷ ಬಿಟ್ಟು ಹೋದ 14 ಮಂದಿಯನ್ನು ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಅಧ್ಯಕ್ಷರ ಜೊತೆ ಮಾತನಾಡುತ್ತೇನೆ ಎಂದರು.

ಕೋವಿಡ್ ಲಸಿಕೆಯ ಎರಡನೇ ಡೋಸ್‍ಗಾಗಿ ರಾಜ್ಯದ ಜನ ಪರದಾಡುತ್ತಿದ್ದಾರೆ. ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ನಡೆಸುವಲ್ಲಿ ಈ ಸರ್ಕಾರ ವಿಫಲವಾಗಿದೆ. 18 ವರ್ಷ ಮೀರಿದವರಿಗೆ ಲಸಿಕೆ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಎಲ್ಲಿಯೂ ಲಸಿಕೆ ಸಿಗುತ್ತಿಲ್ಲ ಎಂದು ತಿಳಿಸಿದರು.

ಇನ್ನು ಲಸಿಕೆ ದಾಸ್ತಾನಿಲ್ಲ ಎಂದು ಬಿಬಿಎಂಪಿ ಆಯುಕ್ತರೇ ಹೇಳಿದ್ದಾರೆ. ಆರೋಗ್ಯ ಸಚಿವರು ಮಾತ್ರ ನಮ್ಮಲ್ಲಿ ಸಮಸ್ಯೆಯೇ ಇಲ್ಲ ಎನ್ನುತ್ತಿದ್ದಾರೆ. ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ತಮ್ಮ ವಿರುದ್ಧ ಯಾವುದೇ ವಿಡಿಯೋ ಪ್ರಸಾರ ಮಾಡದಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ನ್ಯಾಯಾಲಯದಿಂದ ತಡೆ ಆದೇಶ ತಂದಿದ್ದಾರೆ. ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಆಗಿದೆ ಅವರ ಸ್ಥಿತಿ. ಕುಂಬಳ ಕಾಯಿ ಕಳ್ಳ ಎಂದರೆ ಅವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...