NEWSನಮ್ಮರಾಜ್ಯರಾಜಕೀಯ

ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ ಮಾಜಿ ಸಿಎಂ ಎಚ್‌ಡಿಕೆ ಹಾಲಿ ಸಿಎಂ ಬಿಎಸ್‌ವೈ ಭೇಟಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜೆಡಿಎಸ್‌ ವರಿಷ್ಠ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲದ ಜತೆಗೆ ಸಂಚಲನ ಮೂಡಿಸಿದೆ.

ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಶಾಸಕರೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಿಎಂ ಭೇಟಿ ನಂತರ ಮಾತನಾಡಿದ ಎಚ್‌ಡಿಕೆ, ಮೈಷುಗರ್‌ ಕಾರ್ಖಾನೆ ವಿಚಾರವಾಗಿ ಮಂಡ್ಯ ಜಿಲ್ಲೆಯ ರೈತ ಹಿತರಕ್ಷಣಾ ಸಮಿತಿ ಸದಸ್ಯರು ನನ್ನನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಮಂಡ್ಯದ ಶಾಸಕರು, ವಿಧಾನಪರಿಷತ್‌ ಸದಸ್ಯರೊಂದಿಗೆ ನಾನು ಸಿಎಂ ಭೇಟಿಯಾದೆ ಎಂದು ಹೇಳಿದರು.

ಮೈಷುಗರ್‌ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಡುವ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ಅದು ಐತಿಹಾಸಿಕ ಕಾರ್ಖಾನೆ ಸರ್ಕಾರದ ವ್ಯಾಪ್ತಿಯಲ್ಲೇ ಇರಬೇಕು ಯಾವುದೇ ಕಾರಣಕ್ಕೂ ಖಾಸಗಿ ಮಾಡಬೇಡಿ ಎಂದು ಸಿಎಂಗೆ ಮನವಿ ಮಾಡಿದ್ದೇನೆ. ಇನ್ನು ಕಾರ್ಖಾನೆ ಖಾಸಗಿಯವರ ಪಾಲಾಗಲು ಅವಕಾಶ ನೀಡುವುದಿಲ್ಲ ಎಂದು ಸಿಎಂ ನನಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...