CrimeNEWSನಮ್ಮಜಿಲ್ಲೆ

ಶ್ರೀರಂಗಪಟ್ಟಣ: ಮದುವೆ ಆದರೆ ಬೇರೆಬೇರೆ ಆಗುತ್ತಿವೆಂದು ಹೆದರಿದ ಅವಳಿ ಸಹೋದರಿಯರ ಆತ್ಮಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ಮದುವೆಯಾದರೆ ನಾವಿಬ್ಬರೂ ಬೇರೆಯಾಗಿಬಿಡುತ್ತೇವೆ ಎಂದು ಹೆದರಿಂದ ಅವಳಿ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹುಣಸನಹಳ್ಳಿ ಗ್ರಾಮದ ನಿವಾಸಿ ಸುರೇಶ್ ಎಂಬುವರ ಪುತ್ರಿಯರಾದ ದೀಪಿಕಾ (19), ದಿವ್ಯಾ (19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಂಬಾ ಅನ್ಯೂನ್ಯವಾಗಿದ್ದ ಸಹೋದರಿಯರು ಮದುವೆಯಾದರೆ ಇಬ್ಬರೂ ಬೇರೆಬೇರೆಯಾಗುತ್ತೇವೆ ಎಂದು ಯೋಚಿಸಿದ ಬೇರ್ಪಡಲು ಇಚ್ಛಿಸದೇ ಒಟ್ಟಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಮನೆಯ ತಮ್ಮ ತಮ್ಮ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಂತಿಮ‌ ವರ್ಷದ ಡಿಪ್ಲೊಮಾ‌ ಓದುತ್ತಿದ್ದ ಸಹೋದರಿಯರು ಚಿಕ್ಕಂದಿನಿಂದಲೂ ಅನ್ಯೂನ್ಯವಾಗಿದ್ದು ಸಾವಿನಲ್ಲೂ ಜತೆಯಾಗುವ ಕಟು ನಿರ್ಧಾರ ತೆಗೆದುಕೊಂಡು ಹೀಗೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇಬ್ಬರೂ ಹೆಣ್ಣು ಮಕ್ಕಳು ದೊಡ್ಡವರಾಗಿದ್ದಾರೆ. ಆದ್ದರಿಂದ ಅವಿಗೆ ಒಂದೇ ಬಾರಿಗೆ ಮದುವೆ ಮಾಡಿಬಿಡೋಣ ಎಂದು ದಿವ್ಯಾ ಹಾಗೂ ದೀಪಿಕಾ ಅವರ ತಂದೆ ಸುರೇಶ್ ಮತ್ತು ತಾಯಿ ಯಶೋದಾ ನಿರ್ಧರಿಸಿದ್ದರು.

ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪಾಲಕರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಬೇರೆ ಬೇರೆ ಮನೆಗಳನ್ನು ಸೇರಿದರೆ ತಮ್ಮ ಬಾಂಧವ್ಯಕ್ಕೆ ಎಲ್ಲಿ ಧಕ್ಕೆಯಾಗುತ್ತದೆ ಎಂದು ಹೆದರಿದ ಸಹೋದರಿಯರು ಸಂಜೆ ವೇಳೆಗೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರು ಪುತ್ರಿಯರನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತ್ತಿತ್ತು. ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...