CrimeNEWSದೇಶ-ವಿದೇಶ

ತಂಗಿಯನ್ನೇ  ಗರ್ಭಿಣಿ ಮಾಡಿದ ಅಣ್ಣ: ಇಬ್ಬರೂ ಅಪ್ರಾಪ್ತರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿರುಪತಿ​: ಸ್ವಂತ ತಂಗಿಯ ಮೇಲೆ ಅಣ್ಣನೊಬ್ಬ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವುದು  ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಪ್ರಕರಣದ ಅಣ್ಣ-ತಂಗಿ ಇಬ್ಬರೂ ಅಪ್ರಾಪ್ತರೇ ಆಗಿದ್ದಾರೆ. ಬಾಲಕಿ ಆಗಾಗ ಹೊಟ್ಟೆನೋವು ಎಂದು ಸಂಕಟ ಪಡುತ್ತಿದ್ದಳು. ಅದನ್ನು ಕಂಡು ತಾಯಿ ವಿಚಾರಿಸಿದಾಗ, ಅಣ್ಣ ತನ್ನನ್ನು ಬಳಸಿಕೊಂಡ ಬಗ್ಗೆ  ಬಾಲಕಿ ತಿಳಿಸಿದ್ದಾಳೆ. ಕೂಡಲೇ ತಾಯಿ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ತನ್ನ ತಂಗಿಯನ್ನು ಹೆದರಿಸಿ ಬಲವಂತವಾಗಿ ಪದೇಪದೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನಂತೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಾಳೆ.

ತಂದೆಯ ಎರಡನೇ ಪತ್ನಿಯ ಮಗಳು: ಉಪನಗರ ಕಾಲೋನಿಯ ವ್ಯಕ್ತಿ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಆಕೆಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದ್ದಾರೆ. ನಂತರ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಆಕೆ ಗಂಡನನ್ನು ತೊರೆದು ಮನೆ ಬಿಟ್ಟು ಹೋಗಿದ್ದಾಳೆ.

ಬಳಿಕ ಆ ವ್ಯಕ್ತಿ ಇನ್ನೊಂದು ಮದುವೆಯಾಗಿದ್ದು, ಎರಡನೇ ಪತ್ನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಕಳೆದ ಆರು ತಿಂಗಳಿಂದ ಮೊದಲ ಹೆಂಡತಿಯ ಮಗ 16 ವರ್ಷದ ಬಾಲಕ, ತನ್ನ ತಂದೆಯ ಎರಡನೇ ಹೆಂಡತಿ (ಚಿಕ್ಕಮ್ಮ)ನ ಮನೆಗೆ ಆಗಾಗ ಬಂದು ಹೋಗುತ್ತಿದ್ದಾಗ ಈ ಕೃತ್ಯ ಎಸಗಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕ  14 ವರ್ಷದ ತನ್ನ ತಂಗಿಯ ಮೇಲೆ ನಿರಂತರ  ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿಯೂ ಬೆದರಿಕೆ ಹಾಕಿರುವ ವಿಚಾರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಗರ್ಭಿಣಿಯಾಗಿರುವುದು ಬಾಲಕಿಗೆ ಗೊತ್ತಿಲ್ಲ. ಆದರೆ ಆಗಾಗ ಹೊಟ್ಟೆನೋವು ಎಂದು ಸಂಕಟ ಪಡುತ್ತಿದ್ದರಿಂದ ಕೃತ್ಯ ಬೆಳಕಿಗೆ ಬಂದಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...