ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಹಾಲಿ ಕೇಂದ್ರ ಸಚಿವರಾಗಿದ್ದ ಗೆಹ್ಲೋಟ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ಈಗ ಇರುವ ರಾಜ್ಯಪಾಲರಾದ ವಿ.ಆರ್.ವಾಲಾ ಅವರ ಅಧಿಕಾರವಧಿ ಮುಗಿದಿದ್ದು, ಆದರೂ ಅವರನ್ನು ಮುಂದುವರಿಸಲಾಗಿತ್ತು. ಆದರೆ ಈಗ ಕರ್ನಾಟಕದ 19ನೇ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಸದ್ಯದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ.