NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವಿಶ್ವ ಗುರು ಬಸಣ್ಣನವರ ಪ್ರತಿಮೆ ಸ್ಥಾಪನೆಗೆ ವಿಧಾನಸೌಧದಲ್ಲಿ ಸ್ಥಳ ಪರಿಶೀಲಿಸಿದ ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ವಿಶ್ವ ಗುರು ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳ ವೀಕ್ಷಿಸಲು ಕಾಲ್ನಡಿಗೆಯಲ್ಲಿ ತೆರಳಿದ ಸಿಎಂ ಜತೆ ಸಚಿವರಾದ ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಸಿಎಸ್ ರವಿಕುಮಾರ್ ಕೂಡ ತೆರಳಿದರು. ಈ ಹಿಂದೆ ಅಂಬೇಡ್ಕರ್ ಮತ್ತು ನೆಹರು ಪ್ರತಿಮೆ ಇದ್ದ ಸ್ಥಳದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಪರಿಶೀಲನೆ ನಡೆಸಲಾಗುತ್ತಿದೆ.

ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ರಾಜ್ಯ ಸರ್ಕಾರ ಒಲವು ತೋರಿದ್ದು, ಪ್ರಸ್ತಾವನೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮುಖ್ಯಮಂತ್ರಿ ಸೂಚಿಸಿದ್ದರು. ಇನ್ನು ಈ ವಿಚಾರವಾಗಿ ಕರ್ನಾಟಕದ ಶಕ್ತಿ ಕೇಂದ್ರ ಹಾಗೂ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಪ್ರತಿಷ್ಠಾಪಿಸುವ ನಿರ್ಧಾರ ಸೂಕ್ತ ಮತ್ತು ಸ್ವಾಗತಾರ್ಹವಾದುದಾಗಿದೆ ಎಂದು ಹಲವು ಸಂಘ ಸಂಸ್ಥೆಗಳು ಪ್ರತಿಕ್ರಿಯೆ ನೀಡಿವೆ.

12 ಶತಮಾನದಲ್ಲೇ ವಚನ ಸಾಹಿತ್ಯದ ಅತ್ಯಂತ ಮಹತ್ವದ ಹೆಸರಾದ ಬಸವೇಶ್ವರರು ಕರ್ನಾಟಕದ ಅಸ್ಮಿತೆಯನ್ನು ವಿಶ್ವದಾದ್ಯಂತ ಸಾರುವಲ್ಲಿ ನೆರವಾಗಿದ್ದಾರೆ. ಇನ್ನು ಹೀಗೆ ಕನ್ನಡ ನಾಡಿನಲ್ಲಿ ಜೀವ ತಳೆದ ತತ್ವಜ್ಞಾನಿ, ಬಸವಣ್ಣ ಅಥವಾ ಬಸವೇಶ್ವರರು ಕಾಯಕವೇ ಕೈಲಾಸ ಎಂಬ ತತ್ವವನ್ನು ಪ್ರತಿಪಾದಿಸಿದ್ದು, ಅವರ ಜೀವನ, ಸಂದೇಶ ಮತ್ತು ತತ್ವಗಳು ಇಂದಿಗೂ ಆದರ್ಶಪ್ರಾಯವಾಗಿವೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?