NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ ಎಂಡಿ ಸಿ.ಶಿಖಾ ಮತ್ತೆ ಎತ್ತಂಗಡಿ: ನೂತನ ಎಂಡಿಯಾಗಿ ಡಾ.ಎಂ.ಟಿ.ರೆಜು ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ಹಿಂದೆ ವರ್ಗಾವಣೆಗೊಂಡ ಎರಡೇ ದಿನಗಳಲ್ಲಿ ಮತ್ತೆ ರಾಜ್ಯ ಸರ್ಕಾರ  ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ  ಅಧಿಕಾರಿ ಸಿ.ಶಿಖಾ ಅವರನ್ನು ಮರುನೇಮಕ ಮಾಡಿತ್ತು. ಆದರೆ ಈಗ ಮತ್ತೆ ಒಂದು ವಾರ ಕಳೆಯುವಷ್ಠರಲ್ಲೇ ಎತ್ತಂಗಡಿ ಮಾಡಿದೆ. ಅವರ ಜಾಗಕ್ಕೆ ಐಎಎಸ್‌ ಅಧಿಕಾರಿ ಡಾ.ಎಂ.ಟಿ. ರೆಜು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು 2005ನೇ ಬ್ಯಾಚ್‌ನ ಕರ್ನಾಟಕ ಕೆಡರ್ ಐಪಿಎಸ್ ಅಧಿಕಾರಿ ಡಾ. ಎಂ.ಟಿ. ರೆಜು ಅವರನ್ನು ಕರ್ನಾಟಕ ಅರ್ಬನ್ ಇನ್ಫಾಸ್ಟ್ರಕ್ಚರ್‌ ಡೆವಲಪ್ ಮೆಂಟ್ ಆಂಡ್‌ ಫೈನಾನ್ಸ್ ಕಾರ್ಪೋರೇಶನ್ (ಕೆಯುಐಡಿಎಫ್‌ಸಿ) ನಿಂದ ವರ್ಗಾವಣೆ ಮಾಡಿ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಿದೆ. ಜತೆಗೆ ಕೆಯುಐಡಿಎಫ್‌ಸಿ ಎಂಡಿಯಾಗಿಯೂ ಮುಂದುವರಿಯುವಂತೆ ಸರ್ಕಾರ ಸೂಚಿಸಿದೆ.

ಇನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಅವರನ್ನು ಈ ಹಿಂದೆ ವರ್ಗಾವಣೆ ಮಾಡಲಾಗಿದ್ದ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿಯೇ ಮುಂದುವರಿಯುವಂತೆ ಆದೇಶಿಸಿದೆ.

ಸಿ. ಶಿಖಾ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ಜೂ.29ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಎರಡೇ ದಿನದಲ್ಲಿ ಅಂದರೆ ಜು.2ರಂದು ಮತ್ತೆ ಶಿಖಾ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಮರು ನೇಮಕ ಮಾಡಿತ್ತು. ಮತ್ತೆ ಜುಲೈ 7ರಂದು ವರ್ಗಾವಣೆ ಮಾಡಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ