NEWSನಮ್ಮಜಿಲ್ಲೆನಮ್ಮರಾಜ್ಯ

ಪಕ್ಷದ್ರೋಹಿಗಳು,ಅಧಿಕಾರ ಲಾಲಸಿಗಳ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪಕ್ಷದ್ರೋಹಿಗಳು ಮತ್ತು ಅಧಿಕಾರ ಲಾಲಸಿಗಳನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬಾರದು‌, ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ರಾಜಕಾರಣದಲ್ಲಿ ಅಧಿಕಾರಕ್ಕಿಂತ ಸೈದ್ಧಾಂತಿಕ ಬದ್ಧತೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಎಂದರೆ ಒಂದು ಚಳವಳಿ. ಸಾರ್ವಜನಿಕ ಹಿತಾಸಕ್ತಿಯ ಪರ ಮತ್ತು ಅನ್ಯಾಯದ ವಿರುದ್ಧ ಹೋರಾಟ ನಡೆಸುವ, ಸಂಕಷ್ಟದಲ್ಲಿರುವ ದೇಶದ ಜನರ ಧ್ವನಿಯಂತೆ ಕೆಲಸ ಮಾಡುವ ಪಕ್ಷ ನಮ್ಮದು. ನಮ್ಮ ಈ ಹೋರಾಟ ನಿರಂತರ ಎಂದು ತಿಳಿಸಿದ್ದಾರೆ.

ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ಬರುವ ಮಾಹಿತಿ ಇದೆ. ಮೊದಲ‌ ಮತ್ತು ಎರಡನೇ ಅಲೆಯಲ್ಲಿ ಸೋಂಕು ತಗುಲಿಲ್ಲ ಎಂದು ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೊರೊನಾದ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಕೇಂದ್ರ ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಟು ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಂದಾಜಿನ ಪ್ರಕಾರ ಮೂರೂವರೆ ಲಕ್ಷ ಮಂದಿ ಸತ್ತಿರಬಹುದು. ಹಾಗಾಗಿ ಸರ್ಕಾರ ಕೊರೊನಾ ಸಾವಿನ ಗಣತಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ರೂ.1.20 ಲಕ್ಷ ಕೋಟಿ. ಜನರ ಕಷ್ಟ ಅರ್ಥಮಾಡಿಕೊಂಡು ಈಗಲಾದರೂ ಕೇಂದ್ರ
ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಬೇಕು ಎಂದು ಸರಣಿ ಟ್ವೀಟ್‌ ಮೂಲಕ ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ