NEWSದೇಶ-ವಿದೇಶರಾಜಕೀಯ

ಕೇಂದ್ರ ಸರ್ಕಾರ: ರಾಜ್ಯದ ನಾಲ್ವರು ನೂತನ ಸಚಿವರಿಗೆ ಖಾತೆ ಹಂಚಿಕೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಸರ್ಕಾರ 12 ಸಚಿವರ ರಾಜೀನಾಮೆ ಪಡೆದು 43 ನೂತನ ಸಚಿವರ ಪದಗ್ರಹಣ ಮಾಡಿಸುವ ಮೂಲಕ ಸಂಪುಟ ಪುನಾರಚನೆ ಮಾಡಿದ್ದು, ಹೊಸಬರಿಗೆ ಖಾತೆ ಹಂಚಿಕೆ ಮಾಡಿದೆ.

ನೂತನ ಸಂಪುಟದಲ್ಲಿ ಕರ್ನಾಟಕದ ನಾಲ್ವರು ನೂತನ ಸಚಿವರಾದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ್ ಖೂಬ ಅವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಸಾಮಾಜಿಕ ಸಚಿವಾಲಯದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ರಾಜ್ಯ ಸಚಿವ ಖಾತೆಯನ್ನು ಎ.ನಾರಾಯಣಸ್ವಾಮಿ ಅವರಿಗೆ ನೀಡಲಾಗಿದೆ. ಇನ್ನು ಕೌಶಲ್ಯ ಸಚಿವಾಲಯದಲ್ಲಿ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವಾಲಯದ ರಾಜ್ಯ ಸಚಿವ ಸ್ಥಾನವನ್ನು ರಾಜೀವ್ ಚಂದ್ರಶೇಖರ್ ಗೆ ವಹಿಸಲಾಗಿದೆ.

ಕೃಷಿ ಮತ್ತು ರೈತರ ಕಲ್ಯಾಣದ ರಾಜ್ಯ ಸಚಿವೆ ಸ್ಥಾನವನ್ನು ಶೋಭ ಕರಂದ್ಲಾಜೆ ಅವರಿಗೆ ವಹಿಸಿದ್ದು, ಹೊಸ ಮತ್ತು ನವೀಕರಿಸಬಹುದಾದ ಶಕ್ತಿ ಹಾಗೂ ರಾಸಾಯನಿಕ ರಸಗೊಬ್ಬರಗಳ ಇಲಾಖೆ ರಾಜ್ಯ ಸಚಿವ ಸ್ಥಾನವನ್ನು ಭಗವಂತ್ ಖೂಬಗೆ ನೀಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...