ಕಲಬುರಗಿ: ಪ್ರಸ್ತುತ ಹವಾಮಾನ ಇಲಾಖೆಯ ಪ್ರಕಾರ ಜುಲೈ 8 ರಿಂದ 15ರವರೆಗೆ ಗಂಡೋರಿನಾಲಾ ಯೋಜನೆ ಜಲಾಶಯದ ಪ್ರದೇಶದಲ್ಲಿ ಭಾರಿ ಮಳೆಯಾಗಲಿದ್ದು, ಸದ್ಯ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಣೆಕಟ್ಟಿನಲ್ಲಿ ಪ್ರತಿಶತ 79.66 ರಷ್ಟು ನೀರು ಸಂಗ್ರಹವಾಗಿದೆ.
ಹೆಚ್ಚಿನ ಒಳಹರಿವು ಬಂದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಆಣೆಕಟ್ಟಿನ ಸುರಕ್ಷತೆ ಮತ್ತು ಪ್ರವಾಹ ನಿಯಂತ್ರಣಕ್ಕಾಗಿ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐಪಿಸಿ ವಿಭಾಗ ನಂ. 1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಆದ್ದರಿಂದ ನದಿ ಪ್ರವಾಹದಿಂದ ನದಿ ಪಾತ್ರದ ಗ್ರಾಮಗಳಾದ ಕುರಿಕೋಟಾ, ಮಹಾಗಾಂವ ಹಾಗೂ ದಸ್ತಾಪೂರ ಗ್ರಾಮಗಳು ತೊಂದರೆ ಉಂಟಾಗಬಹುದಾಗಿದೆ. ಪ್ರಯುಕ್ತ ನದಿಯ ಅಕ್ಕಪಕ್ಕದ ರೈತರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದು, ಬಟ್ಟೆ ಒಗೆಯುವುದು, ದನಕರುಗಳಿಗೆ ನೀರು ಕುಡಿಸಲು ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು.
ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೆ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ.