NEWSನಮ್ಮರಾಜ್ಯ

ಸಾರಿಗೆ ನೌಕರರ ಜೂನ್‌ ತಿಂಗಳ ವೇತನ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯದ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳಿಗೂ ಜೂನ್‌ ತಿಂಗಳ ವೇತನಕ್ಕಾಗಿ ಸರ್ಕಾರ ಹಣ ಬಿಡುಗಡೆ ಮಾಡಿದೆ.

ನಾಲ್ಕೂ ಸಂಸ್ಥೆಗಳ ಅಧಿಕಾರಿ/ ಸಿಬ್ಬಂದಿಗಳ ಜೂನ್‌ ವೇತನಕ್ಕಾಗಿ ಬಳಸಿಕೊಳ್ಳಲು ಜಿಡಿಎಫ್‌ಪಿ ಷರತ್ತು ಸಡಿಲಿಸಿ 2021-22 ನೇ ಸಾಲಿನ ಸಹಾಯಧನದಡಿ ಒದಗಿಸಿರುವ ಅನುದಾನದಡಿ 16,250 ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಿ ಆದೇಶಿಸಿದೆ.

ಅದರಲ್ಲಿ ಕೆಎಸ್ಆರ್ಟಿಸಿಗೆ 5,088 ಲಕ್ಷ ರೂ.ಗಳು, ಬಿಎಂಟಿಸಿ 4931 ಲಕ್ಷ ರೂ.ಗಳು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 3,321 ಲಕ್ಷ ರೂ.ಗಳು, ಎನ್‌ಇಕೆಆರ್‌ಟಿಸಿ ( ಪ್ರಸ್ತುತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ) 2910 ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಕೋರಿಕೆ ಮೇರೆಗೆ ಸರ್ಕಾರ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಜೂನ್‌ ತಿಂಗಳ ವೇತನಕ್ಕಾಗಿ 162.5 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅಂದರೆ ಜೂನ್‌ ತಿಂಗಳ ವೇತನಕ್ಕಾಗಿ ಶೇ.50ರಷ್ಟು ಬಿಡುಗಡೆ ಮಾಡಿದೆ. ಉಳಿದ ಶೇ.50ರಷ್ಟು ವೇತನವನ್ನು ಆಯಾಯ ಸಂಸ್ಥೆಗಳೇ ಭರಿಸಬೇಕೆ ಎಂಬುದರ ಬಗ್ಗೆ ಸ್ಪಷ್ಟ ಪಡಿಸಿಲ್ಲ.

ಇನ್ನು ಕಳೆದ ಏಪ್ರಿಲ್‌ನಲ್ಲಿ ಶೇ. 50ರಷ್ಟು ಮತ್ತು ಮೇ ತಿಂಗಳಿನಲ್ಲಿ ಶೇ. 75 ರಷ್ಟು ಮೂಲ ವೇತನ ಮತ್ತು ತುಟ್ಟಿಭತ್ಯೆ ಸೇರಿ 325 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು.

ಉಳಿದ  ಏಪ್ರಿಲ್‌ ತಿಂಗಳ ಶೇ. 50 ಮತ್ತು ಮೇ ತಿಂಗಳ 25 ರಷ್ಟು ವೇತನವನ್ನು ಸಾರಿಗೆ ಸಂಸ್ಥೆಗಳೇ ತಮ್ಮ ಸಂಪನ್ಮೂಲಗಳಿಂದ ಭರಿಸಬೇಕಿತ್ತು. ಪ್ರಸ್ತುತ ಜೂನ್‌ ತಿಂಗಳ ವೇತನದ ಶೇ.50ರಷ್ಟು ಬಿಡುಗಡೆ ಮಾಡಿರುವ ಸರ್ಕಾರ ಉಳಿದ ಶೇ.50 ರಷ್ಟು ವೇತನವನ್ನು ಆಯಾಯ ಸಂಸ್ಥೆಗಳು ಭರಿಸಬೇಕು ಎಂಬ ಲೆಕ್ಕಚಾರದಲ್ಲಿ ತಿಳಿಸಿದಂತೆ ಕಾಣುತ್ತಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...