ಬೆಂಗಳೂರು: ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.
ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ವಿರೋಧಿಗಳಿಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸಕ್ಕೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಮುಂದಾಗಿದ್ದು, ಆಕ್ರೋಶ ಹೊರ ಹಾಕುತ್ತಿದ್ದಾರೆ. ಶುಕ್ರವಾರ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಇಂದು ರಾಕ್ಲೈನ್ ವೆಂಕಟೇಶ್ ನಿವಾಸದ ಮುಂದೆ ಅಪಾರ ಪ್ರಮಾಣದ ಕಾರ್ಯಕರ್ತರು ಸೇರ್ಪಡೆಯಾಗಿದ್ದರು.
ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ರಾಕ್ಲೈನ್ ವೆಂಕಟೇಶ್ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. ಕೆಎಸ್ಆರ್ಪಿ ಪೊಲೀಸರು, ಸ್ಥಳೀಯ ಠಾಣೆಯ ಪೊಲೀಸರ ನಿಯೋಜನೆ ಮಾಡಲಾಗಿದ್ದು, ರಾಕ್ಲೈನ್ ಮನೆ ಸಂಪರ್ಕಿಸುವ ರಸ್ತೆಗೆ ಬ್ಯಾರಿಕೇಡ್ ಹಾಕಲಾಗಿದೆ.