Vijayapatha – ವಿಜಯಪಥ
Saturday, November 2, 2024
NEWS

ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳು ಭಾರಿ ಮಳೆ ಸಾಧ್ಯತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಂಗಾಳಕೊಲ್ಲಿಯ ಪಶ್ಚಿಮ ಮಧ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೀಗಾಗಿ ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅನಾವಶ್ಯವಾಗಿ ಹೊರ ಹೋದಂತೆ ಜಾಗ್ರತೆ ವಹಿಸಬೇಕಿದೆ.

ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲೂ ಮಳೆ ಇನ್ನು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದೆ ಕೂಡ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಈ ಬಾರಿ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತು. ಮುಂಗಾರು ಪ್ರವೇಶದ ನಂತರ ಮೊದಲ ಒಂದೆರಡು ವಾರಗಳನ್ನು ಹೊರತುಪಡಿಸಿದರೆ ಎಲ್ಲೆಡೆ ಮಳೆ ಕಡಿಮೆಯಾಗಿತ್ತು. ಆದರೆ, ಇದೀಗ ಮಳೆ ಬರಲು ಆರಂಭಿಸಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಜು.15ರ ವರೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ